ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಮಂಗಳವಾರ ಬೆಳಿಗ್ಗೆ ಆಟೋರಿಕ್ಷಾ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮಹಿಳೆಯರು ಮತ್ತು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಹಿಳೆಯರು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡಿಟ್ಟು ತಮ್ಮ ಮನೆಗೆ ಹಿಂತಿರುಗುತ್ತಿದ್ದರು’ ಎಂದು ಗ್ವಾಲಿಯರ್ ಎಸ್ಪಿ ಅಮಿತ್ ಸಂಘಿ ತಿಳಿಸಿದ್ದಾರೆ.

ಪ್ರಯಾಣಿಕರಲ್ಲಿ 8 ಮಂದಿ ಮಹಿಳೆಯರು ಮತ್ತು ಆಟೋರಿಕ್ಷಾ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ, ಉಳಿದವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

₹4 ಲಕ್ಷ ಪರಿಹಾರ: ಮೃತರ ಕುಟುಂಬಸ್ಥರಿಗೆ ತಲಾ ₹4 ಲಕ್ಷ ಹಾಗೂ ಗಾಯಗೊಂಡವರಿಗೆ ₹50,000 ಪರಿಹಾರ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.