ಮುಂಬೈ: ಬಾರಾಮತಿ ವಾಯುನೆಲೆಯ ಬಳಿ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಬುಧವಾರ ಬೆಳಿಗ್ಗೆ ಅಪಘಾತಕ್ಕೀಡಾಗಿದೆ.

ರೆಡ್ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿ ಒಡೆತನದ ಟೆಕ್ನಮ್ ಪಿ2008ಜೆಸಿ ಎರಡು ಆಸನಗಳ ವಿಮಾನವು ಬೆಳಿಗ್ಗೆ 8.50ರ ಸುಮಾರಿಗೆ ಬಾರಾಮತಿ ವಾಯುನೆಲೆಯ ಪಕ್ಕದಲ್ಲಿರುವ ಗೋಜುಬಾವಿ ಗ್ರಾಮದ ಬಳಿ ದುರಂತಕ್ಕೀಡಾಗಿದೆ.

ಪುಣೆ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ಅವರು ಈ ಘಟನೆಯನ್ನು ದೃಢಪಡಿಸಿದ್ದು, ‘ವಿಮಾನವು ಕಡಿಮೆ ಎತ್ತರದಲ್ಲಿ ಹಾರುತ್ತಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ನೆಲಕ್ಕೆ ಅಪ್ಪಳಿಸುವ ಮೊದಲು ವಿಮಾನದ ಒಂದು ಬದಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ

‘ತರಬೇತಿಯಲ್ಲಿದ್ದ ಪೈಲೆಟ್ ಸುರಕ್ಷಿತರಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ’ ಎಂದು ರೆಡ್ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.