ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Ram Temple | ಅಯೋಧ್ಯೆ ಸ್ವಚ್ಛತಾ ಕಾರ್ಯಕ್ಕೆ 800 ಸಿಬ್ಬಂದಿ

Published 10 ಜನವರಿ 2024, 15:06 IST
Last Updated 10 ಜನವರಿ 2024, 15:06 IST
ಅಕ್ಷರ ಗಾತ್ರ

ಅಯೋಧ್ಯೆ: ಅಯೋಧ್ಯೆ ನಗರವನ್ನು ಸ್ವಚ್ಛವಾಗಿಡಲು ನಗರಾಡಳಿತವು 800 ಸ್ವಚ್ಛತಾ ಸಿಬ್ಬಂದಿ ನಿಯೋಜಿಸಲಿದೆ. 

ಮಕರ ಸಂಕ್ರಾಂತಿ ಅಂಗವಾಗಿ ಭಾರಿ ಸಂಖ್ಯೆಯ ಭಕ್ತರು ಸರಯೂ ನದಿಯಲ್ಲಿ ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಜ.22ರಂದು ನಡೆಯುವ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲೂ ಅಪಾರ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ನಗರಾಡಳಿತವು ಸಿದ್ಧತೆಯಲ್ಲಿ ತೊಡಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

800 ಸ್ವಚ್ಛತಾ ಸಿಬ್ಬಂದಿಯ ನಿಯೋಜನೆ ಮತ್ತು ಮೇಲ್ವಿಚಾರಣೆ ಮಾಡುವ ಏಜೆನ್ಸಿಯ ಆಯ್ಕೆ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಸಿಬ್ಬಂದಿ ರಸ್ತೆ, ಘಾಟ್‌ಗಳು, ಶೌಚಾಲಯ, ಕಚೇರಿ ಮತ್ತಿತರ ಸ್ಥಳಗಳನ್ನು ಸ್ವಚ್ಛ ಮಾಡಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT