ನವದೆಹಲಿ:ರಾಜಕೀಯವಾಗಿ ಭಾರಿ ಮಹತ್ವ ಪಡೆದುಕೊಂಡಿರುವ ಅಯೋಧ್ಯೆಯ ರಾಮ ಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ಒಡೆತನ ವಿವಾದದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಆರಂಭಿಸಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಪ್ರಕರಣದ ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿಗಳಾದ ಎಸ್.ಎ. ಬೊಬ್ಡೆ, ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್.ಎ. ನಜೀರ್ ಈ ಪೀಠದಲ್ಲಿದ್ದಾರೆ.

ನಿವೇಶನ ವಿವಾದದಲ್ಲಿ ಅಲಹಾಬಾದ್ ಹೈಕೋರ್ಟ್ 2010ರಲ್ಲಿ ನೀಡಿದ್ದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ 14 ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ.

2.77 ಎಕರೆ ವಿವಾದಿತ ನಿವೇಶನವನ್ನು ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾಡ ಮತ್ತು ರಾಮಲಲ್ಲಾ ನಡುವೆ ಸಮನಾಗಿ ಹಂಚಿಕೊಳ್ಳುವಂತೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.