ಅಯೋಧ್ಯೆ (ಉತ್ತರ ಪ್ರದೇಶ): ದೀಪಾವಳಿ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ಎರಡು ತಿಂಗಳ ಕಾಲ ನಡೆಯುವ ದೀಪೋತ್ಸವಕ್ಕೆ ಸರ್ಕಾರವು ಭರದ ಸಿದ್ಧತೆ ನಡೆಸಿದೆ.

ಈ ಬಾರಿಯ ದೀಪೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ತೀರ್ಮಾನಿಸಿದೆ.

ಗಿನ್ನಿಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ 12 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸುವ ಗುರಿಯನ್ನು ಹೊಂದಲಾಗಿದೆ. ಈ ಉದ್ದೇಶದಿಂದ ಅಯೋಧ್ಯೆ, ಲಖನೌ, ಗೊಂಡಾ ಮತ್ತಿತರ ಜಿಲ್ಲೆಗಳಿಂದ ಮಣ್ಣಿನ ದೀಪಗಳನ್ನು ತರಿಸಲಾಗುತ್ತಿದೆ.

ಈಗಾಗಲೇ ದೀಪಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಬಾರಿ ದೀಪೋತ್ಸವವನ್ನು ಕಳೆದ ಐದು ವರ್ಷಗಳಿಗಿಂತ ಭಿನ್ನವಾಗಿ ಆಚರಿಸಲಾಗುತ್ತಿದೆ. ಈ ವರ್ಷ 30 ನಿಮಿಷಕ್ಕೂ ಹೆಚ್ಚು ಕಾಲ ದೀಪಗಳು ಉರಿಯಲಿವೆ. ಈಗ ಜನರು ದೀಪಗಳು ಹೆಚ್ಚು ಕಾಲ ಉರಿಯುವುದನ್ನು ವೀಕ್ಷಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಕಳೆದ ವರ್ಷ ದೀಪೋತ್ಸವದಲ್ಲಿ 9 ಲಕ್ಷ ದೀಪಗಳನ್ನು ಬೆಳಗಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.