ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಆ.5ರಂದು ರಾಮಮಂದಿರದ ಭೂಮಿಪೂಜೆ ನಡೆದ ಬಳಿಕ ₹100 ಕೋಟಿಗೂ ಅಧಿಕ ದೇಣಿಗೆ ಸಂಗ್ರಹವಾಗಿದೆ ಎಂದು ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ.

‘ವಿದೇಶಗಳಿಂದಲೂ ದೇಣಿಗೆ ಬಂದಿದ್ದು, ಇವುಗಳನ್ನು ಇನ್ನಷ್ಟೇ ಲೆಕ್ಕಹಾಕಬೇಕಾಗಿದೆ. ಜೊತೆಗೆ 200 ಕೆ.ಜಿ ಬೆಳ್ಳಿ ಹಾಗೂ ಇತರೆ ಬೆಲೆಬಾಳುವ ವಸ್ತುಗಳು ದೇಣಿಗೆಯಾಗಿ ಬರುತ್ತಿವೆ’ ಎಂದು ಟ್ರಸ್ಟ್‌ನ ಪ್ರಕಾಶ್ ಗುಪ್ತಾ ತಿಳಿಸಿದರು.

‘ಭಕ್ತರ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ನಗರದ ಒಂದು ಭಾಗದಿಂದ ರಾಮಮಂದಿರದ ಆವರಣಕ್ಕೆ ರೋಪ್‌ವೇ ನಿರ್ಮಾಣದ ಚಿಂತನೆಯೂ ಇದ್ದು, ಈ ಕುರಿತು ಯುರೋಪ್ ಮೂಲದ ಕಂಪನಿಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ. ಮಂದಿರ ನಿರ್ಮಾಣ ಚಟುವಟಿಕೆಯೂ ಚುರುಕು ಪಡೆದಿದೆ’ ಎಂದು ಅಯೋಧ್ಯೆ ಮಹಾನಗರ ಪಾಲಿಕೆ ಆಯುಕ್ತ ವಿಶಾಲ್ ಸಿಂಗ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.