ದೀಪೋತ್ಸವದಲ್ಲಿ ಯೋಗಿ ಮಾತ್ರ ಭಾಗಿ
ಅಯೋಧ್ಯೆಯಲ್ಲಿ ಭಾನುವಾರ ನಡೆದ ದೀಪೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಚಾಲನೆ ನೀಡಿದರು. ಆದರೆ, ಉಪಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಹಾಗೂ ಬೃಜೇಶ್ ಪಾಠಕ್ ಅವರು ಸಮಾರಂಭದಿಂದ ದೂರ ಉಳಿಯುವ ಮೂಲಕ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಬಹಿರಂಗಪಡಿಸಿದರು. ರಾಜ್ಯದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಯೋಗಿ ಆದಿತ್ಯನಾಥ ಕಡೆಗಣಿಸುತ್ತಿದ್ದಾರೆ ಎಂದು ನೊಂದು ಇಬ್ಬರೂ ದೂರ ಉಳಿದರು ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.