ಜೈಪುರ: ದೇಶದಲ್ಲಿ ಮೊಘಲರ ಆಕ್ರಮಣದ ಸಂದರ್ಭದಲ್ಲಿ ಬಾಬರ್ ಮತ್ತು ಔರಂಗಜೇಬ್ ಬಹಳಷ್ಟು ದೇವಸ್ಥಾನಗಳನ್ನು ಕೆಡವಿ ಮಸೀದಿ ನಿರ್ಮಿಸಿದ್ದಾರೆ ಎಂದು ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಹೇಳಿದ್ದಾರೆ.

ಅಜ್ಮೀರ್ದಲ್ಲಿರುವ, ಸೂಫಿ ಸಂತ ಮೊಯಿನುದ್ದೀನ್ ಚಿಶ್ತಿ ದರ್ಗಾ ಒಳಗಡೆ ಶಿವನ ದೇವಸ್ಥಾನವಿದೆ ಎಂಬುದಾಗಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ), ಅಜ್ಮೀರ್ ದರ್ಗಾ ಸಮಿತಿ ಮತ್ತು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ಸ್ಥಳೀಯ ನ್ಯಾಯಾಲಯವೊಂದು ನೋಟಿಸ್ ಜಾರಿ ಮಾಡಿದ್ದು, ಈ ಕುರಿತಂತೆ ಸಚಿವರು ಪ್ರತಿಕ್ರಿಯಿಸಿದ್ದಾರೆ.

ಒಂದು ವೇಳೆ ನ್ಯಾಯಾಲಯದ ಆದೇಶದ ಮೇಲೆ ಉತ್ಖನನ ನಡೆದರೆ, ಅಲ್ಲಿ ಕಂಡುಬರುವ ಅವಶೇಷಗಳ ಆಧಾರದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ವಿಶ್ವದಾದ್ಯಂತ ಹೆಸರುವಾಸಿಯಾಗಿರುವ ಅಜ್ಮೀರ್ ದರ್ಗಾಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಾರೆ.

‘ದೇಶದ ಬಹಳಷ್ಟು ದೇಗುಲಗಳನ್ನು ಕೆಡವಿ, ಬಾಬರ್ ಮತ್ತು ಔರಂಗಜೇಬ್ ಮಸೀದಿಗಳನ್ನು ನಿರ್ಮಿಸಿರುವುದು ಸತ್ಯ. ನ್ಯಾಯಾಲಯ ಉತ್ಖನನಕ್ಕೆ ಆದೇಶಿಸಿದರೆ ಅಲ್ಲಿ ಸಿಗುವ ಅವಶೇಷಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ಎಂದಿದ್ದಾರೆ.

ಅಜ್ಮೀರ್ದಲ್ಲಿರುವ, ಸೂಫಿ ಸಂತ ಮೊಯಿನುದ್ದೀನ್ ಚಿಶ್ತಿ ದರ್ಗಾ ಒಳಗಡೆ ಶಿವನ ದೇವಸ್ಥಾನವಿದೆ ಎಂಬುದಾಗಿ ಹಿಂದೂ ಸೇನಾ ಸಂಘಟನೆ ಮುಖಂಡ ವಿಷ್ಣು ಗುಪ್ತ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ಮುಂದೂಡಲಾಗಿದೆ.
.ಅಜ್ಮೀರ್: ಮೊಯಿನುದ್ದೀನ್ ಚಿಶ್ತಿ ದರ್ಗಾದಲ್ಲಿ ಶಿವನ ದೇಗುಲ ಇರುವ ಕುರಿತು ದಾವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.