ಬಾಗಲಕೋಟೆ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಶುಕ್ರವಾರ ಬಾಗಲಕೋಟೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.

ನಗರದ ಎಪಿಎಂಸಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ 100ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು. ಕೇಂದ್ರ ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಪರೀಕ್ಷೆಯ ಗೌಪ್ಯತೆ, ವಿಶ್ವಾಸರ್ಹತೆ ಕುರಿತು ಉದ್ಭವಿಸಿರುವ ಗಂಭೀರ ಪ್ರಶ್ನೆಗಳು, ಆರೋಪಿತರ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಲಾಯಿತು.

ಪ್ರವೇಶ ಪರೀಕ್ಷೆಗಳ ಪಾವಿತ್ರ್ಯ ಮತ್ತು ವಿಶ್ವಾಸಾರ್ಹತೆಯೊಂದಿಗೆ ಯಾವುದೇ ರೀತಿಯ ತಾಳ್ಮೆ ಅಥವಾ ರಾಜಿ ಸರಿಯಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಕೇವಲ ಪರೀಕ್ಷಾ ವ್ಯವಸ್ಥೆ ಮೇಲಿನ ದಾಳಿಯಷ್ಟೇ ಅಲ್ಲ, ವರ್ಷಪೂರ್ತಿ ಶ್ರಮಪಟ್ಟು ತಯಾರಿ ನಡೆಸುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲಿನ ಅನ್ಯಾಯವೂ ಆಗಿದೆ ಎಂದು ದೂರಿದರು.

ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ನಿಗದಿತ ಅವಧಿಯೊಳಗೆ ತನಿಖೆ ನಡೆಸಬೇಕು. ಅಕ್ರಮಕ್ಕೆ ಸಹಕಾರ ನೀಡಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪಾರದರ್ಶಕತೆ ಕಾಪಾಡಬೇಕು ಎಂದು ಆಗ್ರಹಿಸಲಾಯಿತು.

ಪರೀಕ್ಷಾ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ವಿಭಾಗ ಸಂಚಾಲಕರಾದ ಪ್ರಥಮೇಶ್ ವಾಘಮೋಡೆ, ಜಿಲ್ಲಾ ಸಂಚಾಲಕ ವಿಪುಲ್ ಪೇಟ್ಕರ್, ರವಿ ದಂಡಗಿ, ಸುಮಾ, ತರುಣ್, ಬಸವರಾಜ್, ಕಾರ್ತಿಕ್, ಪುರುಷೋತ್ತಮ, ಸುದರ್ಶನ ಸೇರಿದಂತೆ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-19-1466869400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.