ಬಾಗಲಕೋಟೆ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಜಿಲ್ಲಾ ಘಟಕವು ಮೇ 20 ರಂದು ಮುಷ್ಕರ ಹಮ್ಮಿಕೊಂಡಿದೆ ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಆರ್.ಕಟ್ಟಿ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಔಷಧಗಳ ಆನ್ಲೈನ್ ಮಾರಾಟ ನಿಲ್ಲಿಸುವುದು. ಕಾರ್ಪೋರೇಟ್ ವಿನಾಯಿತಿ ನಿಲ್ಲಿಸುವುದು. ನಕಲಿ ಔಷಧ ದೂರವಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದರು.

ಬೆಳಿಗ್ಗೆ 11ಕ್ಕೆ ನವನಗರದ ಜಿಲ್ಲಾಡಳಿತ ಭವನದ ಮುಂದೆ ನಡೆಯುವ ಪ್ರತಿಭಟನೆಯಲ್ಲಿ ಎಲ್ಲಾ ಔಷಧ ವ್ಯಾಪಾರಿಗಳು ಅಂಗಡಿ ಮುಚ್ಚಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈ ಮುಷ್ಕರವು ರಾಷ್ಟ್ರದಾದ್ಯಂತ ನಡೆಯಲಿದ್ದು, ಸಂಘದ ಎಲ್ಲ ಸದಸ್ಯರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ದೇಶದಲ್ಲಿ 12.40 ಲಕ್ಷಕ್ಕೂ ಹೆಚ್ಚಕ್ಕೂ ಔಷಧ ವ್ಯಾಪಾರಿಗಳಿದ್ದು, ಆನ್ಲೈನ್ ಪೋರ್ಟಲ್ಗಳ ಅನಿಯಂತ್ರಿತವಾಗಿ ಕಾರ್ಯ ನಿರ್ವಹಿಸುವುದರಿಂದ ಅದರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಬೇಕಾಗಿದೆ ಎಂದರು.

ಅಕ್ರಮಣಕಾರಿ ಬೆಲೆ ನಿಗದಿ, ತುರ್ತು ಅಧಿಸೂಚನೆಗಳನ್ನು ಹಿಂತೆಗೆದುಕೊಳ್ಳಬೇಕು. ಕೋವಿಡ್ ಸಮಯದಲ್ಲಿ ಮಾಡಲಾದ ಅಧಿಸೂಚನೆ ಮುಂದುವರಿಸಿದ್ದು, ಅದನ್ನು ತಕ್ಷಣವೇ ರದ್ದುಗೊಳಿಸಬೇಕು. ಸರ್ಕಾರ ಸೂಕ್ತ ಕ್ರಮಕೈಗೊಳ್ಳದಿದ್ದರೆ ಅನಿರ್ದಿಷ್ಠಾವಧಿ ಮುಷ್ಕರ ಮಾಡಲಾಗುವುದು ಎಂದು ಹೇಳಿದರು.

ಅಧ್ಯಕ್ಷ ಅಶೋಕ ಬಿಜ್ಜಳ, ಪ್ರಭು ಬೀಳಗಿ, ಗುರುದತ್ತ ಗುಳೇದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-19-1362661045

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.