ಬಳ್ಳಾರಿ: ‘ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿರುವ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆದುಕೊಳ್ಳಬೇಕು’ ಎಂದು ಆಗ್ರಹಿಸಿ, ಲೈಂಗಿಕ ಅಲ್ಪಸಂಖ್ಯಾತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಗಡಿಗಿ ಚೆನ್ನಪ್ಪ (ರಾಯಲ್) ವೃತ್ತದ ಬಳಿ ಜಮಾಯಿಸಿದ ಲೈಂಗಿಕ ಅಲ್ಪಸಂಖ್ಯಾತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

‘ಮಸೂದೆ ಪ್ರಕಾರ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಯನ್ನು ಕಿನ್ನರ್, ಹಿಜ್ರಾ, ಅರವಾಣಿ, ಜೋಗತ ಅಥವಾ ಯುನಕ್ ಎಂಬ ಸಾಂಸ್ಕೃತಿಕ ಗುರುತುಗಳಿಗೆ ಸೀಮಿತಗೊಳಿಸಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಸ್ವಯಂ ಗುರುತಿನ ಹಕ್ಕು ಸೇರಿದಂತೆ ಎಲ್ಲ ಹಕ್ಕುಗಳನ್ನು ರಕ್ಷಿಸುವ ಬದಲು ಕಸಿದುಕೊಳ್ಳಲಾಗುತ್ತಿದೆ. ಮಸೂದೆ ಅನುಷ್ಠಾನಗೊಂಡರೆ ಟ್ರಾನ್ಸ್ಮೆನ್ಗಳನ್ನು ಕಾನೂನಿನ ಪ್ರಕಾರ ಟ್ರಾನ್ಸ್ಜೆಂಡರ್ ವ್ಯಕ್ತಿಗಳೆಂದು ಪರಿಗಣಿಸದೇ ಅವರ ಎಲ್ಲ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತದೆ’ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.

‘ಹೋರಾಟದಿಂದ ಪಡೆದುಕೊಂಡ ಹಕ್ಕುಗಳನ್ನು ಈ ಮಸೂದೆಯ ಮೂಲಕ ಹಿಂಪಡೆಯಲಾಗುತ್ತಿದೆ. ಇದು ನಮ್ಮ ಅಸ್ತಿತ್ವವನ್ನು ಗುರುತಿಸುವ ಮೂಲಭೂತ ತತ್ವಕ್ಕೆ ವಿರುದ್ಧವಾದ ನಡೆ. ಈ ಮಸೂದೆಯನ್ನು ತಕ್ಷಣವೇ ವಾಪಸ್ ಪಡೆದುಕೊಳ್ಳಬೇಕು’ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.

‘ಬಲವಂತದ ಲಿಂಗ ಬದಲಾವಣೆ, ಶೋಷಣೆ ಮತ್ತು ಹಿಂಸಾಚಾರ ಮೊದಲಾದ ಅಪರಾಧಗಳಿಗೆ ಕಠಿಣ ಶಿಕ್ಷೆ ಪರಿಚಯಿಸಿರುವುದು ಸ್ವಾಗತಾರ್ಹ. ಆದರೆ, ಲಿಂಗಪರಿವರ್ತಿತ ವ್ಯಕ್ತಿಗಳ ಮೂಲಭೂತ ಹಕ್ಕುಗಳ ಹಾಗೂ ಸ್ವಾಯತ್ತತೆಯನ್ನು ಕುಗ್ಗಿಸುವ ಕೆಲಸ ಆಗಬಾರದು’ ಎಂದು ಆಗ್ರಹಿಸಿದರು.

‘ಯಾವುದೇ ಕಾನೂನು ಲಿಂಗಪರಿವರ್ತಿತ ವ್ಯಕ್ತಿಗಳಿಗೆ ಸಂಬಂಧಿಸಿದ ಹಕ್ಕುಗಳು ಹಾಗೂ ಒಳಗೊಳ್ಳುವಿಕೆಯನ್ನು ಬಲಪಡಿಸಬೇಕೇ ಹೊರತು ಅದನ್ನು ಸೀಮಿತಗೊಳಿಸುವ ಅಥವಾ ಸಂವಿಧಾನಾತ್ಮಕ ರಕ್ಷಣೆಗಳನ್ನು ದುರ್ಬಲಗೊಳಿಸುವಂತೆ ಆಗಬಾರದು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-25-199672530

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.