ಕಸಂ ಖಾನ್ ಕಿ ಢಾಣಿ ಗ್ರಾಮದಲ್ಲಿ ಸಂಶಯಾಸ್ಪದ ವಸ್ತುವೊಂದು ಪತ್ತೆಯಾಗಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಯುತ್ತಿದೆ. ಗುಪ್ತಚರ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ರವಾನಿಸಲಾಗಿದೆ ಎಂದು ಪೊಲೀಸರು ತಿಳಸಿದ್ದಾರೆ.