ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ರಸ್ತೆಗಳಲ್ಲಿ ಹಬ್ಬಗಳ ಆಚರಣೆಗೆ ನಿಷೇಧ

Last Updated 20 ಏಪ್ರಿಲ್ 2023, 3:00 IST
ಅಕ್ಷರ ಗಾತ್ರ

ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂಬರುವ ಈದ್, ಅಕ್ಷಯ ತೃತೀಯ ಮತ್ತು ಪರಶುರಾಮ ಜಯಂತಿ ಹಬ್ಬಗಳನ್ನು ರಸ್ತೆಗಳಲ್ಲಿ ಆಚರಣೆ ನಡೆಸದಂತೆ ವಾಹನ ಸಂಚಾರಕ್ಕೆ ಅಡ್ಡಿ ಉಂಟುಮಾಡದಂತೆ ಪೊಲೀಸ್ ಇಲಾಖೆ ತಿಳಿಸಿದೆ.

ಧಾರ್ಮಿಕ ಕಾರ್ಯಕ್ರಮಗಳನ್ನು ಒಳಾಂಗಣದಲ್ಲಿ ನಡೆಸಬೇಕು. ರಸ್ತೆ ಸಂಚಾರಕ್ಕೆ ಅಡ್ಡಿಯಾಗಲು ಅವಕಾಶ ನೀಡಬಾರದು ಎಂದು ರಾಜ್ಯದ ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಸೂಚಿಸಿದ್ದಾರೆ.

ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬಾರದು. ಈ ಹಿಂದೆ ಸರಿಯಾದ ಸಂವಹನ ಮತ್ತು ಸಮನ್ವಯದಿಂದ ಇದನ್ನು ಮಾಡಲು ಸಾಧ್ಯವಾಯಿತು. ಈ ವರ್ಷವೂ ಅಂತಹ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಮಾಹಿತಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಅನುಮತಿ ಪಡೆಯಾದ ಯಾವುದೇ ಧಾರ್ಮಿಕ ಮೆರವಣಿಗೆಗೆ ಅವಕಾಶ ನೀಡದಂತೆ ಅಧಿಕಾರಿಗಳಿಗೆ ಪ್ರಶಾಂತ್ ತಿಳಿಸಿದ್ದಾರೆ.

ನಾಗರಿಕರ ಸುರಕ್ಷತೆ ನಮ್ಮ ಜವಾಬ್ದಾರಿಯಾಗಿದೆ. ಏಪ್ರಿಲ್ 22 ರಂದು ಈದ್-ಉಲ್-ಫಿತರ್, ಅಕ್ಷಯ ತೃತೀಯ ಮತ್ತು ಪರಶುರಾಮ ಜಯಂತಿಯನ್ನು ಒಂದೇ ದಿನ ಆಚರಿಸುವುದರಿಂದ ಇತ್ತಿಚೀನ ಬೆಳವಣಿಗೆ ಗಮನಿಸಿ ಸಾರ್ವಜನಿಕರ ಹಿತ ದೃಷ್ಟಿಯಿಂದ ಎಚ್ಚರವಹಿಸಿಬೇಕು ಎಂದು ಪ್ರಶಾಂತ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ಪೊಲೀಸರು ಗಸ್ತು ತಿರುಗುವಂತೆ ವಿಶೇಷ ಡಿಜಿಪಿ ಪ್ರಶಾಂತ್ ಕುಮಾರ್ ಸೂಚಿಸಿದ್ದಾರೆ. ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಕಣ್ಣಿಡಬೇಕು. ಪ್ರತಿ ಪ್ರಮುಖ ಘಟನೆಗಳನ್ನು ವಿಡಿಯೊಗ್ರಾಫಿ ಮಾಡಬೇಕು. ಸೂಕ್ಮ ವಿಚಾರಗಳ ಬಗ್ಗೆ ಗಮನಹರಿಸಿ ಎಂದರು.

ಪೊಲೀಸ್ ಮಹಾನಿರ್ದೇಶಕ ಆರ್.ಕೆ. ವಿಶ್ವಕರ್ಮ ಅವರು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ಜಿಲ್ಲಾವಾರು ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT