2024ರ ಆಗಸ್ಟ್ನಲ್ಲಿ ಅವಾಮಿ ಲೀಗ್ ಸರ್ಕಾರ ಪತನಗೊಂಡ ಬಳಿಕ ಅಧಿಕಾರ ವಹಿಸಿಕೊಂಡ ಮಧ್ಯಂತರ ಸರ್ಕಾರವನ್ನು ಬದಲಿಸಲು ನಡೆದ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್ಪಿ) ಭರ್ಜರಿ ಬಹುಮತ ಪಡೆದುಕೊಂಡಿದೆ. ಈ ಗೆಲುವಿನ ರೂವಾರಿ ಬಿಎನ್ಪಿ ಅಧ್ಯಕ್ಷ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಎಕ್ಸ್ ಮೂಲಕ ಅಭಿನಂದನೆ ಸಲ್ಲಿಸಿರುವ ನರೇಂದ್ರ ಮೋದಿಯವರು, ‘ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್ಪಿಯನ್ನು ಬಹುಮತದತ್ತ ಕೊಂಡೊಯ್ದ ತಾರಿಕ್ ರೆಹಮಾನ್ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ಈ ಗೆಲುವು ಬಾಂಗ್ಲಾದೇಶದ ಜನರು ನಿಮ್ಮ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯನ್ನು ತೋರಿಸುತ್ತದೆ’ ಎಂದಿದ್ದಾರೆ.

‘ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶವನ್ನು ಬೆಂಬಲಿಸುವುದನ್ನು ಭಾರತ ಮುಂದುವರಿಸುತ್ತದೆ. ನಮ್ಮ ಬಹುಮುಖ ಸಂಬಂಧಗಳನ್ನು ಬಲಪಡಿಸಲು ಹಾಗೂ ಸಾಮಾನ್ಯ ಅಭಿವೃದ್ಧಿ ಗುರಿಗಳನ್ನು ತಲುಪುವ ಉದ್ದೇಶದಿಂದ ನಿಮ್ಮೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.
.ತಾರಿಕ್ ರೆಹಮಾನ್: 20 ವರ್ಷಗಳ ಅಜ್ಞಾತವಾಸ, ದೇಶಕ್ಕೆ ಬಂದ ಎರಡೇ ತಿಂಗಳಿಗೆ ಪ್ರಧಾನಿ.ಬಾಂಗ್ಲಾದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ; ಸ್ಪಷ್ಟ ಬಹುಮತ ಸಾಧಿಸಿದ ಬಿಎನ್ಪಿ.
ಇವರ ಜೊತೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ತಾರಿಕ್ ಅವರಿಗೆ ಎಕ್ಸ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

‘ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ ತಾರಿಕ್ ರೆಹಮಾನ್ ಮತ್ತು ಬಿಎನ್ಪಿಯನ್ನು ನಾನು ಅಭಿನಂದಿಸುತ್ತೇನೆ’ ಎಂದಿದ್ದಾರೆ.

ಮುಂದುವರೆದು, ‘ಭಾರತ ಮತ್ತು ಬಾಂಗ್ಲಾದೇಶಗಳು ಐತಿಹಾಸಿಕವಾಗಿ, ಭಾಷೆ, ಸಂಸ್ಕೃತಿ ಮತ್ತು ಇತರೆ ಅನೇಕ ವಿಚಾರಗಳಲ್ಲಿ ಸಾಮಾನ್ಯ ಸಾಮ್ಯತೆ ಹೊಂದಿವೆ. ಆಳವಾಗಿ ಬೇರೂರಿರುವ ಬಂಧಗಳನ್ನು ಹಂಚಿಕೊಂಡಿವೆ. ನಮ್ಮ ಪ್ರದೇಶದ ಸ್ಥಿರತೆ ಮತ್ತು ಶಾಂತಿಗಾಗಿ ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶವನ್ನು ಎಲ್ಲಾ ಭಾರತೀಯರು ಬೆಂಬಲಿಸುತ್ತಾರೆ’ ಎಂದು ಬರೆದಿದ್ದಾರೆ.

ಬಾಂಗ್ಲಾದೇಶದಲ್ಲಿ ಲೋಕಸಭಾ ಚುನಾವಣೆಯ ಮತದಾನ ನಿನ್ನೆ (ಗುರುವಾರ) ನಡೆದಿದ್ದು, ನಿನ್ನೆಯಿಂದಲೇ ಮತ ಎಣಿಕೆ ಕೂಡ ನಡೆಯುತ್ತಿದೆ. ಬಹುತೇಕ ಮಾಧ್ಯಮಗಳು ತಾರಿಕ್ ರೆಹಮಾನ್ ಅವರ ಬಿಎನ್ಪಿ ಬಹುಮತ ಪಡೆದಿದೆ ಎಂದು ವರದಿ ಮಾಡಿವೆ. ಅಧಿಕೃತ ಫಲಿತಾಂಶ ಇನ್ನಷ್ಟೇ ಬರಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.