ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಂಗ್ಲಾದೇಶ ಸಂಸದನ ಹತ್ಯೆ: ಸೆಪ್ಟಿಕ್ ಟ್ಯಾಂಕ್‌ನಲ್ಲಿ 3.5 ಕೆ.ಜಿ ಮಾಂಸ ಪತ್ತೆ!

ಕೊಲೆ ನಡೆದ ಫ್ಲಾಟ್‌ನ ಸೆಪ್ಟಿಕ್ ಟ್ಯಾಂಕ್‌ನಿಂದ ಸುಮಾರು 3.5 ಕೆ.ಜಿಯಷ್ಟು ಮಾಂಸದ ತುಂಡುಗಳು ಹಾಗೂ ಕೂದಲುಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Published 29 ಮೇ 2024, 3:40 IST
Last Updated 29 ಮೇ 2024, 3:40 IST
ಅಕ್ಷರ ಗಾತ್ರ

ಕೋಲ್ಕತ್ತ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್‌ ಅವರ ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪಶ್ಚಿಮ ಬಂಗಾಳ ಸಿಐಡಿ ಪೊಲೀಸರು ಕೊಲೆ ನಡೆದ ಫ್ಲಾಟ್‌ನ ಸೆಪ್ಟಿಕ್ ಟ್ಯಾಂಕ್‌ನಿಂದ ಸುಮಾರು 3.5 ಕೆ.ಜಿಯಷ್ಟು ಮಾಂಸದ ತುಂಡುಗಳು ಹಾಗೂ ಕೂದಲುಗಳನ್ನು ವಶಕ್ಕೆ ಪಡೆದಿದ್ದಾರೆ.

ಅನಾರ್‌ ಅವರನ್ನು ಕೊಲೆ ಮಾಡಿ ಅವರ ದೇಹವನ್ನು ಸುಮಾರು 80 ತುಣುಕುಗಳಾಗಿ ಕತ್ತರಿಸಿ ಅದಕ್ಕೆ ಅರಿಷಿಣ ಪುಡಿಯನ್ನು ಮಿಶ್ರಣ ಮಾಡಲಾಗಿದೆ. ನಂತರ ಅವುಗಳನ್ನು ಫ್ಲಾಟ್‌ನ ಸೆಪ್ಟಿಕ್ ಟ್ಯಾಂಕ್ ಸೇರಿದಂತೆ ಸನಿಹದ ಕಾಲುವೆಗೆ ಎಸೆಯಲಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಕಂಡುಕೊಂಡಿದ್ದಾರೆ.

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್‌ ಅವರು ಚಿಕಿತ್ಸೆಗೆಂದು ಕೋಲ್ಕತ್ತಕ್ಕೆ ಬಂದು ಮೇ 18ರಂದು ಕಾಣೆಯಾಗಿದ್ದರು. ಅವರ ಮೃತದೇಹ ಮೇ 22ರಂದು ಕೋಲ್ಕತ್ತದ ನ್ಯೂಟೌನ್ ಅಪಾರ್ಟ್‌ಮೆಂಟ್ ಫ್ಲಾಟ್‌ ಒಂದರಲ್ಲಿ ಪತ್ತೆಯಾಗಿತ್ತು. ಅಂದೇ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಾಂಗ್ಲಾ ಪೊಲೀಸರು ಬಂಧಿಸಿದ್ದರು. ಪಶ್ಚಿಮ ಬಂಗಾಳದಲ್ಲಿ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

ವಶಪಡಿಸಿಕೊಂಡಿರುವ ಮಾಂಸದ ತುಂಡುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಹೆಚ್ಚಿನ ತನಿಖೆಗಾಗಿ ಫ್ಲಾಟ್‌ನ ಒಳಚರಂಡಿ ಪೈಪ್‌ಗಳನ್ನು ಒಡೆಯಬೇಕಾಗುತ್ತದೆ. ಇದಕ್ಕೆ ನಿವಾಸಿಗಳು ಸಹಕರಿಸಬೇಕು ಎಂದು ಸಿಐಡಿ ಪೊಲೀಸರು ಕೇಳಿಕೊಂಡಿದ್ದಾರೆ.

ಅನಾರ್ ಅವರ ಕೊಲೆ ಬಾಂಗ್ಲಾದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದು ಅಲ್ಲಿನ ಪೊಲೀಸರೂ ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲ್ಕತ್ತಕ್ಕೆ ಆಗಮಿಸಿರುವ ಅವರು ಪಶ್ಚಿಮ ಬಂಗಾಳದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರ ಸಹಕಾರವನ್ನು ಕೇಳಿದ್ದಾರೆ.

ಪ್ರಕರಣದಲ್ಲಿ ಇದುವರೆಗೆ ಸಿಐಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವರನ್ನು ವಿಚಾರಣೆ ನಡೆಸಲು ಬಾಂಗ್ಲಾ ಪೊಲೀಸ್ ತಂಡ ಇಚ್ಛೆ ವ್ಯಕ್ತಪಡಿಸಿದೆ.

‘ಇದೊಂದು ಯೋಜಿತ ಹತ್ಯೆ. ಅನ್ವರುಲ್‌ ಅವರ ಆಪ್ತರಾದ ಅಮೆರಿಕದಲ್ಲಿರುವ ಪ್ರಜೆಯೊಬ್ಬರು ಸುಮಾರು ₹5 ಕೋಟಿ ಹಣ ಪಾವತಿಸಿ ಅನ್ವರುಲ್‌ ಅವರನ್ನು ಹತ್ಯೆ ಮಾಡಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಸಿಐಡಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT