ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂಸಾಚಾರ: ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ತನ್ನ ಪ್ರಜೆಗಳಿಗೆ ತಿಳಿಸಿದ ಭಾರತ

Published 5 ಆಗಸ್ಟ್ 2024, 7:10 IST
Last Updated 5 ಆಗಸ್ಟ್ 2024, 7:10 IST
ಅಕ್ಷರ ಗಾತ್ರ

ನವದೆಹಲಿ: ಬಾಂಗ್ಲಾದೇಶದಲ್ಲಿ ಮೀಸಲಾತಿ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಅಲ್ಲಿಗೆ ಪ್ರಯಾಣಿಸದಂತೆ ತನ್ನ ಪ್ರಜೆಗಳಿಗೆ ಭಾರತ ಸಲಹೆ ನೀಡಿದೆ.

ಅಲ್ಲದೇ ಬಾಂಗ್ಲಾದೇಶದಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರಗಳನ್ನು ಸೋಮವಾರ ಮುಚ್ಚಲಾಗುವುದು ಎಂದು ಢಾಕಾದಲ್ಲಿರುವ ಭಾರತದ ರಾಯಭಾರಿ ಕಚೇರಿ ತಿಳಿಸಿದೆ.

‘ಪ್ರಸಕ್ತ ಬೆಳವಣಿಗೆಗಳ ಹಿನ್ನೆಲೆ ಮುಂದಿನ ಸೂಚನೆ ಬರುವವರೆಗೂ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ಕಟ್ಟುನಿಟ್ಟಿನ ಸಲಹೆ ನೀಡಲಾಗಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಡರಾತ್ರಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದಿರಲು ತಿಳಿಸಲಾಗಿದೆ. ಅನಗತ್ಯವಾಗಿ ಹೊರಗಡೆ ಸುತ್ತುವುದನ್ನು ತಪ್ಪಿಸಿ ಎಂದು ಹೇಳಲಾಗಿದೆ. ತುರ್ತು ಸಂದರ್ಭದಲ್ಲಿ ಢಾಕಾದಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿಯನ್ನು ಸಂಪರ್ಕಿಸಿ ಎಂದು ಸೂಚಿಸಲಾಗಿದೆ ಎಂದು ಅದು ತಿಳಿಸಿದೆ.

ವಿವಾದಾತ್ಮಕ ಮೀಸಲಾತಿ ವಿರುದ್ಧ ಬಾಂಗ್ಲಾದಲ್ಲಿ ಪ್ರತಿಭಟನೆ ಆರಂಭವಾಗಿದ್ದರಿಂದ ಇಲ್ಲಿಯವರೆಗೆ 4,500ಕ್ಕೂ ಹೆಚ್ಚು ಭಾರತೀಯರು ಸ್ವದೇಶಕ್ಕೆ ಮರಳಿದ್ದಾರೆ.

ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಭಾನುವಾರ(ಆ. 4) ಆಡಳಿತಾರೂಢ ಅವಾಮಿ ಲೀಗ್‌ ಪಕ್ಷದ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಸುಮಾರು 100 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT