ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Bangladesh Unrest | ಬಂಗಾಳದಲ್ಲಿ ಶಾಂತಿ ಕಾಪಾಡಲು ಸಿಎಂ ಮಮತಾ ಬ್ಯಾನರ್ಜಿ ಮನವಿ

Published 5 ಆಗಸ್ಟ್ 2024, 16:20 IST
Last Updated 5 ಆಗಸ್ಟ್ 2024, 16:20 IST
ಅಕ್ಷರ ಗಾತ್ರ

ಕೋಲ್ಕತ್ತ: ನೆರೆಯ ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದ ಜನತೆ ಯಾವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಬಾಂಗ್ಲಾದೇಶದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ವಿವರಣೆ ನೀಡಲಿದೆ ಎಂದಷ್ಟೆ ಹೇಳಿದ್ದಾರೆ.

ಬಾಂಗ್ಲಾದೇಶದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್‌ ಹಸೀನಾ ಅವರು ಇಂದು ರಾಜೀನಾಮೆ ನೀಡಿದ್ದು, ಸಹೋದರಿಯೊಂದಿಗೆ ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ತಿಳಿಸಿದ್ದಾರೆ.

ಸರ್ಕಾರದ ವಿರುದ್ಧ ಭಾನುವಾರದಿಂದ ಆರಂಭವಾಗಿರುವ ಬೃಹತ್‌ ಪ್ರತಿಭಟನೆಯಿಂದಾಗಿ ಇದುವರೆಗೆ 106 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಸೀನಾ ಅವರು ಇಂದು (ಸೋಮವಾರ) ರಾಜೀನಾಮೆ ಸಲ್ಲಿಸಿ, ದೇಶ ತೊರೆದಿದ್ದಾರೆ ಎಂದು ವರದಿಯಾಗಿದೆ.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ 4,096 ಕಿ.ಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ಹೈ ಅಲರ್ಟ್ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT