ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Bangla Unrest: ಭಾರತಕ್ಕೆ ಮರಳಿದವರ ಬಗ್ಗೆ ರಾಜ್ಯಸಭೆಗೆ ಸರ್ಕಾರ ಮಾಹಿತಿ

Published : 9 ಆಗಸ್ಟ್ 2024, 3:34 IST
Last Updated : 9 ಆಗಸ್ಟ್ 2024, 3:34 IST
ಫಾಲೋ ಮಾಡಿ
Comments

ನವದೆಹಲಿ: ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಉಂಟಾದ ನಂತರ ಅಲ್ಲಿಂದ 7,200 ಭಾರತೀಯರು ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಈ ಮಾಹಿತಿ ನೀಡಿದ್ದಾರೆ.

ವಿದೇಶಾಂಗ ಇಲಾಖೆ ದಾಖಲೆಗಳ ಪ್ರಕಾರ 19.000 ಭಾರತೀಯರು ಬಾಂಗ್ಲಾದೇಶದಲ್ಲಿ ಇದ್ದರು. ಅದರಲ್ಲಿ 9000 ವಿದ್ಯಾರ್ಥಿಗಳೂ ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ಬಾಂಗ್ಲಾದಲ್ಲಿ ವ್ಯಾಪಾರ ವಹಿವಾಟು ನಡೆಸುವವರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಭಾರತಕ್ಕೆ ಬರಲು ಬಯಸುವವರನ್ನು ಹಾಗೂ ಸಂಕಷ್ಟದಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ಸರ್ಕಾರ ಸಿದ್ದವಿದೆ ಎಂದು ತಿಳಿಸಿದ್ದಾರೆ.

ಉದ್ಯೋಗದಲ್ಲಿ ಮೀಸಲು ಕೋಟಾ ವಿರೋಧಿಸಿ ವಿದ್ಯಾರ್ಥಿ ಸಮುದಾಯದ ಪ್ರತಿಭಟನೆಯಿಂದಾಗಿ ಬಾಂಗ್ಲಾದಲ್ಲಿ ಅರಾಜಕತೆ ನಿರ್ಮಾಣವಾಗಿತ್ತು. ಇದರ ಪರಿಣಾಮ ಶೇಖ್‌ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ದೇಶದಿಂದಲೇ ಪಲಾಯನ ಮಾಡಿದ್ದರು.

ಹಿಂಸಾಚಾರದಲ್ಲಿ ಇದುವರೆಗೆ 560 ಮಂದಿ ಮೃತಪಟ್ಟಿದ್ದಾರೆ. ಹಸೀನಾ ನೇತೃತ್ವದ ಸರ್ಕಾರ ಪತನದ ಬಳಿಕವೂ ದೇಶದಾದ್ಯಂತ ಭುಗಿಲೆದ್ದ ಹಿಂಸಾಚಾರದಲ್ಲಿ 232 ಮಂದಿ ಮೃತಪಟ್ಟಿದ್ದಾರೆ.

ಆಶ್ರಯ ಕೋರಿ ಭಾರತಕ್ಕೆ ವಲಸೆ

ಇನ್ನೊಂದೆಡೆ ಬಾಂಗ್ಲಾದೇಶದ ನೂರಾರು ನಾಗರಿಕರು ಆಶ್ರಯ ಕೋರಿ ಭಾರತಕ್ಕೆ ವಲಸೆ ಬರಲು ಸಿದ್ಧರಾಗಿದ್ದು, ಪಶ್ಚಿಮ ಬಂಗಾಳ ಜಿಲ್ಲೆಯ ಜಲಪಾಯಿಗುರಿ ಜಿಲ್ಲೆಗೆ ಹೊಂದಿಕೊಂಡಿರುವ ಭಾರತ–ಬಾಂಗ್ಲಾದ ಗಡಿಯಲ್ಲಿ ಗುಂಪುಗೂಡುತ್ತಿದ್ದಾರೆ.

ಝಾಪೋರ್ತಾಲಾ ಗಡಿ ಉಪಠಾಣೆ ವ್ಯಾಪ್ತಿಯಲ್ಲಿ ದಕ್ಷಿಣ ಬೆರುಬರಿ ಗ್ರಾಮದ ಬಳಿ ಅವರು ಗುಂಪು ಸೇರಿದ್ದರು. ದೇಶದಲ್ಲಿ ನಮ್ಮ ಮೇಲೆ ಹಲ್ಲೆ ನಡೆಯುವ ಸಾಧ್ಯತೆಗಳಿವೆ ಎಂದು ಈ ನಿವಾಸಿಗಳು ಕಾರಣ ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT