ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ವಂಚನೆ ಪ್ರಕರಣ: ಕೇರಳ ಕಾಂಗ್ರೆಸ್‌ ಮಾಜಿ ನಾಯಕನ ಆಸ್ತಿ ಜಪ್ತಿ

Published 13 ನವೆಂಬರ್ 2023, 13:53 IST
Last Updated 13 ನವೆಂಬರ್ 2023, 13:53 IST
ಅಕ್ಷರ ಗಾತ್ರ

ನವದೆಹಲಿ: ಸಹಕಾರಿ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಕೇರಳ ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಕೆ.ಅಬ್ರಹಾಂ ಮತ್ತು ಅವರಿಗೆ ಸಂಬಂಧಿಸಿದ ವ್ಯಕ್ತಿಯೊಬ್ಬರಿಗೆ ಸೇರಿದ ₹4.34 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಜಪ್ತಿ ಮಾಡಿದೆ.

ಇ.ಡಿ ಇಬ್ಬರನ್ನೂ ಬಂಧಿಸಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ.

ಬ್ಯಾಂಕ್‌ ಅಧ್ಯಕ್ಷರಾಗಿದ್ದ ಅಬ್ರಹಾಂ ಅವರು ಅರ್ಜಿದಾರರ ಸ್ವತ್ತಿನ ಮೌಲ್ಯವನ್ನು ಹೆಚ್ಚು ಮಾಡಿ ಅಧಿಕ ಸಾಲ ಮಂಜೂರಾತಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಇ.ಡಿ ಆರೋಪಿಸಿದೆ.

ವಯನಾಡ್‌ ಜಿಲ್ಲೆಯ ಪುಲ್ಪಳ್ಳಿ ಸೇವಾ ಸಹಕಾರ ಬ್ಯಾಂಕ್‌ನಲ್ಲಿ ಅವ್ಯವಹಾರ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT