ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾರಾಮುಲ್ಲಾ ಎನ್‌ಕೌಂಟರ್‌: ಮೃತ ಉಗ್ರರು ಪಾಕಿಸ್ತಾನದವರು

Published 20 ಜೂನ್ 2024, 13:04 IST
Last Updated 20 ಜೂನ್ 2024, 13:04 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಇಬ್ಬರು ಉಗ್ರರು ಪಾಕಿಸ್ತಾನದವರು ಮತ್ತು ಲಷ್ಕರ್‌–ಎ–ತಯಬಾ (ಎಲ್‌ಇಟಿ) ಉಗ್ರ ಸಂಘಟನೆಯ ಸದಸ್ಯರು ಎಂದು ಸೇನೆಯು ಗುರುವಾರ ತಿಳಿಸಿದೆ.

‘ಮೃತ ಉಗ್ರರನ್ನು ಉಸ್ಮಾನ್‌ ಮತ್ತು ಉಮರ್‌ ಎಂದು ಗುರುತಿಸಲಾಗಿದೆ. ಉಸ್ಮಾನ್‌ 2020ರಿಂದಲೂ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ’ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಈ ಉಗ್ರರನ್ನು ಹತ್ಯೆಗೈದಿದ್ದು ಸೇನೆಗೆ ದೊರೆತ ಮತ್ತೊಂದು ಯಶಸ್ಸು ಎಂದು ಸೇನಾ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT