ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಎ.ಕೆ ಮೊಹಂತಿ ನೇಮಕ

Published 30 ಏಪ್ರಿಲ್ 2023, 22:23 IST
Last Updated 30 ಏಪ್ರಿಲ್ 2023, 22:23 IST
ಅಕ್ಷರ ಗಾತ್ರ

ನವದೆಹಲಿ: ಖ್ಯಾತ ಭೌತ ವಿಜ್ಞಾನಿ ಮತ್ತು ಬಾಬಾ ಪರಮಾಣು ಸಂಶೋಧನಾ ಕೇಂದ್ರದ(ಬಿಎಆರ್‌ಸಿ) ನಿರ್ದೇಶಕ ಅಜಿತ್‌ ಕುಮಾರ್‌ ಮೊಹಂತಿ ಅವರನ್ನು ಪರಮಾಣು ಶಕ್ತಿ ಆಯೋಗದ ಮುಖ್ಯಸ್ಥ ಮತ್ತು ಪರಮಾಣು ಶಕ್ತಿ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕೆ.ಎನ್‌.ವ್ಯಾಸ್‌ ಅವರಿಂದ ತೆರವಾದ ಸ್ಥಾನಕ್ಕೆ ಮೊಹಂತಿ ಅವರನ್ನು ನೇಮಕ ಮಾಡಲಾಗಿದೆ.

ಮೊಹಂತಿ ಅವರು 66 ವರ್ಷ ಪೂರ್ಣಗೊಳ್ಳುವವರೆಗೆ ಅಂದರೆ 2025 ಅಕ್ಟೋಬರ್‌ 10ರ ವರೆಗೆ ಅಥವಾ ಮುಂದಿನ ಆದೇಶದವರೆಗೆ ಅಧಿಕಾರದಲ್ಲಿ ಇರಲಿದ್ದಾರೆ ಎಂದು ಸರ್ಕಾರ ಶನಿವಾರ ಆದೇಶ ಪ್ರತಿಯಲ್ಲಿ ತಿಳಿಸಿದೆ.

ಒಡಿಶಾ ಮೂಲದ ಮೊಹಂತಿ ಅವರು ಮಾರ್ಚ್ 2019ರಲ್ಲಿ ಬಿಎಆರ್‌ಸಿ ನಿರ್ದೇಶಕರಾಗಿ ನೇಮಕವಾಗಿದ್ದರು. ಇದಕ್ಕೂ ಮುನ್ನ ಅವರು ವಿವಿಧ ಸಂಸ್ಥೆಗಳಲ್ಲಿ ಗೌರವಾನ್ವಿತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಭಾರತೀಯ ಭೌತಶಾಸ್ತ್ರ ಸಂಘದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನಂತರ ಅಧ್ಯಕ್ಷರಾಗಿ ಹಾಗೂ ಸಾಹಾ ಪರಮಾಣು ಭೌತವಿಜ್ಞಾನ ಸಂಸ್ಥೆಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT