ಲಖನೌ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಮತ್ತು ಪಕ್ಷದ ಪ್ರಮುಖ ನಾಯಕ, ಸಂಸದ ಸತೀಶ್ ಚಂದ್ರ ಮಿಶ್ರಾ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.

ಬಿಎಸ್‌ಪಿ ವರಿಷ್ಠೆ ಮಾಯಾವತಿ ಅವರು ಪಂಚರಾಜ್ಯ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದು ಸತೀಶ್ ಚಂದ್ರ ಮಿಶ್ರಾ ಹೇಳಿದರು. ಅಲ್ಲದೇ, ಪಕ್ಷದ ಪ್ರಚಾರ, ಚುನಾವಣಾ ತಂತ್ರದ ಜವಾಬ್ದಾರಿ ತಮ್ಮ ಮೇಲಿರುವುದಾಗಿಯೂ ಮಿಶ್ರಾ ತಿಳಿಸಿದರು.

ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಸರ್ಕಾರವನ್ನು ರಚಿಸಲಿದೆ ಎಂದು ಮಿಶ್ರಾ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

‘ಮಾಜಿ ಮುಖ್ಯಮಂತ್ರಿ ಮಾಯಾವತಿ ಮತ್ತು ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಕೆಲವೆಡೆ ಅಭ್ಯರ್ಥಿಗಳೇ ಇಲ್ಲದ ಮೇಲೆ ಸಮಾಜವಾದಿ ಪಕ್ಷ (ಎಸ್‌ಪಿ) ಹೇಗೆ 400 ಸ್ಥಾನಗಳನ್ನು ಗೆಲ್ಲಲಿದೆ? ಎಸ್‌ಪಿಯಾಗಲಿ, ಬಿಜೆಪಿಯಾಗಲಿ ಅಧಿಕಾರಕ್ಕೆ ಬರುವುದಿಲ್ಲ. ಬಿಎಸ್‌ಪಿ ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸಲಿದೆ,’ ಎಂದು ಮಿಶ್ರಾ ಭವಿಷ್ಯ ನುಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.