ಭುವನೇಶ್ವರ (ಒಡಿಶಾ): ದೇಶದಲ್ಲಿ ಕೊರೊನಾ ಸೋಂಕು ಬಿಕ್ಕಟ್ಟು ತಲೆದೋರಿರುವ ನಡುವೆಯೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಮೇ 15, 16ರಂದು ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.

ಆಂದ್ರಪ್ರದೇಶ, ಒಡಿಶಾ, ತಮಿಳುನಾಡು, ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಕರಾವಳಿ ಭಾಗಗಳಾದ್ಯಂತ ಮೇ 15, 16ನೇ ತಾರೀಕಿನಂದು ಭಾರೀ ಮಳೆಯಾಗಲಿದೆ.

ಗಂಟೆಗೆ 100 ಕಿ.ಮೀಗೂ ಹೆಚ್ಚು ವೇಗದಲ್ಲಿ ಬೀಸುವ ಗಾಳಿಯು ದಕ್ಷಿಣದರಾಜ್ಯಗಳ ಕರಾವಳಿ ಪ್ರದೇಶವನ್ನು ಅಪ್ಪಳಿಸಲಿದೆ ಎಂದು ಇಲಾಖೆ ಹೇಳಿದೆ.

ಮಳೆಗಾಲಕ್ಕೂ ಪೂರ್ವ ಉಂಟಾಗುವ ವಾಯುಭಾರ ಕುಸಿತವು ದಕ್ಷಿಣ ಭಾರತದ ಕರಾವಳಿಯ ಮೇಲೆ ಕೆಲವು ನಿರ್ದಿಷ್ಟ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈಗಾಗಲೇ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 12ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಮಳೆ| ರಾಜ್ಯದ 7 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.