ನೋಯ್ಡಾ: ಇಲ್ಲಿನ ಶಾರದಾ ವಿಶ್ವವಿದ್ಯಾಲಯದ ಬಿಡಿಎಸ್ (ಡೆಂಟಲ್ ಸರ್ಜರಿ) ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಗುರುಗ್ರಾಮದ ಜ್ಯೋತಿ ಶರ್ಮಾ (20) ಎಂದು ಗುರುತಿಸಲಾಗಿದೆ.

ಶುಕ್ರವಾರ ರಾತ್ರಿ ಡೆತ್ನೋಟ್ ಬರದಿಟ್ಟು ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಜ್ಯೋತಿ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಧ್ಯಾಪಕರಾದ ಮಹೇಂದರ್ ಮತ್ತು ಶೈರಿ ಎಂಬುವರು ನನಗೆ ಮಾನಸಿಕ ಕಿರುಕುಳ ನೀಡಿ ಅವಮಾನ ಮಾಡಿದ್ದಾರೆ, ಇದರಿಂದ ನೊಂದು ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಇವರನ್ನು ಜೈಲಿಗೆ ಕಳುಹಿಸಬೇಕು ಎಂದು ಜ್ಯೋತಿ ಶರ್ಮಾ ಪತ್ರದಲ್ಲಿ ಬರೆದಿದ್ದಾರೆ.

ಜ್ಯೋತಿ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಆಡಳಿತ ಮಂಡಳಿ ಆ ಇಬ್ಬರು ಪ್ರಾಧ್ಯಾಪಕರನ್ನು ಅಮಾನತು ಮಾಡಿದೆ. ಘಟನೆ ಕುರಿತಂತೆ ತನಿಖೆ ಮಾಡಲು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ. ಹಾಗೂ ಪೊಲೀಸರ ತನಿಖೆಗೆ ಸಹಕಾರ ನೀಡುವುದಾಗಿ ಆಡಳಿತ ಮಂಡಳಿ ತಿಳಿಸಿದೆ.

ಗೌತಮ ಬುದ್ಧ ನಗರದ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.