ಮಥುರಾ: ಮಥುರಾ ಜಿಲ್ಲೆಯ ಬರ್ಸಾನಾ ರಸ್ತೆಯಲ್ಲಿರುವ ಜಿಮ್ನ ಹಿಂಭಾಗದ ಖಾಲಿ ಜಾಗದಲ್ಲಿ ಪೊದೆಗಳ ನಡುವೆ ಮಾಂಸದ ತುಂಡುಗಳು ಬಿದ್ದಿರುವುದು ಕಂಡುಬಂದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಗೋವರ್ದನ ಬಳಿ ಮಾಂಸದ ತುಂಡು ಪತ್ತೆಯಾಗಿದೆ ಎಂಬ ಮಾಹಿತಿ ಮೇರೆಗೆ ಬಂದು ಪರಿಶೀಲಿಸಲಾಗಿದೆ. ಸ್ಥಳೀಯರು ಗೋ ಮಾಂಸವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದು, ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ತಿಳಿಸಿದ್ದಾರೆ.

ಉತ್ತರ ಪ್ರದೇಶ ಗೋ ಹತ್ಯಾ ನಿಷೇಧ ಕಾಯ್ದೆ ಅಡಿಯಲ್ಲಿ, ಗುರುತಿಸಲ್ಪಟ್ಟ 24 ಜನರು ಹಾಗೂ 50 ಅಪರಿಚಿತರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿ ಆದರಿಸಿ ಆರೋಪಿಗಳನ್ನು ಪತ್ತೆಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.