ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ ಅಜ್ಜಿ ಇಂದಿರಾ ಗಾಂಧಿ ಸಹ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು

Last Updated 24 ಮಾರ್ಚ್ 2023, 16:33 IST
ಅಕ್ಷರ ಗಾತ್ರ

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಹಾಗೆ ನೋಡಿದರೆ, ಹಲವು ಸಂಸದರು, ಶಾಸಕರು ಸಹ ಇದೇ ರೀತಿ ತಮ್ಮ ಚುನಾಯಿತ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಆ ಸಾಲಿನಲ್ಲಿ ರಾಹುಲ್ ಗಾಂಧಿಯವರ ಅಜ್ಜಿ ಇಂದಿರಾಗಾಂಧಿ ಸಹ ಇದ್ದಾರೆ.

ಹೌದು, 1975ರಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಜಗಮೋಹನ್ ಲಾಲ್ ಸಿನ್ಹಾ ಇಂದಿರಾ ಗಾಂಧಿಯವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಿ ದೇಶವೇ ತಿರುಗಿ ನೋಡುವಂತಹ ತೀರ್ಪು ನೀಡಿದ್ದರು. ಆ ದಿಟ್ಟ ತೀರ್ಪು ತುರ್ತು ಪರಿಸ್ಥಿತಿಯ ಘೋಷಣೆಗೆ ನೇರವಾಗಿ ಕಾರಣವಾಯಿತು ಎಂದು ಹೇಳಲಾಗುತ್ತದೆ.

ಚುನಾವಣಾ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರನ್ನು ದೋಷಿ ಎಂದು ಘೋಷಿಸಿದ್ದ ನ್ಯಾಯಮೂರ್ತಿ, ಜನಪ್ರತಿನಿಧಿ ಕಾಯಿದೆಯ ಅಡಿಯಲ್ಲಿ 6 ವರ್ಷಗಳ ಕಾಲ ಯಾವುದೇ ಚುನಾಯಿತ ಹುದ್ದೆಯಲ್ಲಿ ಮುಂದುವರಿಯದಂತೆ ತಡೆ ಹಾಕಿದ್ದರು.

2019ರಲ್ಲಿ ಮೋದಿ ಉಪನಾಮವನ್ನು ವ್ಯಂಗ್ಯ ಮಾಡಿದ್ದ ಆರೋಪ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಗುರುವಾರ ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ, ಶುಕ್ರವಾರ ರಾಹುಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT