ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163 (2) ಅಡಿಯಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಿ ಭೋಪಾಲ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು ಸೋಮವಾರ ಸಂಜೆ ಆದೇಶ ಹೊರಡಿಸಿದ್ದಾರೆ.

ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವ ಹಲವು ಮಂದಿ ಭಿಕ್ಷುಕರು ಮಾದಕ ವ್ಯಸನಿಗಳಾಗಿದ್ದಾರೆ. ಅಲ್ಲದೇ ಕೆಲವರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡು ಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಭೋಪಾಲ್ ಜಿಲ್ಲೆಯಲ್ಲಿ ಭಿಕ್ಷೆ ಬೇಡುವುದು ಹಾಗೂ ಭಿಕ್ಷೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭಿಕ್ಷುಕರಿಗೆ ಹಣ ನೀಡುವ ಅಥವಾ ಅವರಿಗಾಗಿ ಯಾವುದೇ ವಸ್ತುಗಳನ್ನು ಖರೀದಿಸಿ ನೀಡುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಸಂಬಂಧಿತ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದೂ ಎಚ್ಚರಿಸಲಾಗಿದೆ.

ರಾಜ್ಯದ ಇಂದೋರ್ ಜಿಲ್ಲೆಯಲ್ಲಿ ಈಗಾಗಲೇ ಭಿಕ್ಷಾಟನೆಯನ್ನು ನಿಷೇಧಿಸಲಾಗಿದೆ.
.ಭಿಕ್ಷಾಟನೆ ಮುಕ್ತ ನಗರ ನಿರ್ಮಾಣಕ್ಕೆ ಇಂದೋರ್ ಪಣ: ಭಿಕ್ಷೆ ನೀಡಿದವರ ವಿರುದ್ಧ FIR.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.