ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೈದರಾಬಾದ್‌ | ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ

Published 24 ಜೂನ್ 2024, 13:40 IST
Last Updated 24 ಜೂನ್ 2024, 13:40 IST
ಅಕ್ಷರ ಗಾತ್ರ

ಹೈದರಾಬಾದ್: ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆಯ ಇ– ಮೇಲ್‌ ಬಂದಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ – ಮೇಲ್‌ ಬಂದ ಬಳಿಕ ಅಧಿಕಾರಿಗಳು ತೀವ್ರ ತಪಾಸಣೆ ನಡೆಸಿದ್ದಾರೆ. ಹಲವು ಗಂಟೆಗಳ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂದು ತಿಳಿದು ಬಂದಿದೆ ಎಂದು ಅಧಿಕಾರಿಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ದೇಶದ ಹಲವು ವಿಮಾನ ನಿಲ್ದಾಣಗಳಿಗೆ ಸ್ನಾನ ಗೃಹಗಳ ಪೈಪ್‌ ಲೈನ್‌ಗಳಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆಯ ಇ– ಮೇಲ್‌ನನ್ನು ಸ್ವೀಕರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೇಶದ ಅನೇಕ ವಿಮಾನ ನಿಲ್ದಾಣಕ್ಕೆ ಇಂದು (ಸೋಮವಾರ) ಬಾಂಬ್‌ ಬೆದರಿಕೆಯ ಇ– ಮೇಲ್‌ಗಳು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT