ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಆಧಾರರಹಿತ ವಾದ; ಅರುಣಾಚಲ ಪ್ರದೇಶ ಅವಿಭಾಜ್ಯ ಅಂಗ: ಭಾರತ

Published 29 ಮಾರ್ಚ್ 2024, 2:29 IST
Last Updated 29 ಮಾರ್ಚ್ 2024, 2:29 IST
ಅಕ್ಷರ ಗಾತ್ರ

ನವದೆಹಲಿ: ಬೀಜಿಂಗ್ ಎಷ್ಟೇ ಸಲ ಬೇಕಾದರೂ ತಗಾದೆ ಎತ್ತಬಹುದು. ಆದರೆ ಅರುಣಾಚಲ ಪ್ರದೇಶ ದೇಶದ ಅವಿಭಾಜ್ಯ ಅಂಗ ಮತ್ತು ಬೇರ್ಪಡಿಸಲಾಗದ ಭಾಗ ಎಂದು ಭಾರತ ಗುರುವಾರ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, 'ಅರುಣಾಚಲ ಪ್ರದೇಶದ ವಿಚಾರದಲ್ಲಿ ಈಗಾಗಲೇ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿದ್ದೇವೆ. ಚೀನಾ ಆಧಾರರಹಿತ ವಾದಗಳನ್ನು ಎಷ್ಟು ಸಲ ಬೇಕಾದರೂ ಪುನರಾವರ್ತಿಸಬಹುದು. ಈ ಚಾಳಿ ಬದಲಾಗುವುದಿಲ್ಲ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿತ್ತು, ಅಂಗವಾಗಿದೆ ಮತ್ತು ಭವಿಷ್ಯದಲ್ಲೂ ಅವಿಭಾಜ್ಯ ಅಂಗವಾಗಿಯೇ ಇರುತ್ತದೆ' ಎಂದು ಹೇಳಿದ್ದಾರೆ.

ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್, ಸೋಮವಾರ ಅರುಣಾಚಲ ಪ್ರದೇಶದ ಮೇಲೆ ತಮ್ಮ ಹಕ್ಕನ್ನು ಸ್ಥಾಪಿಸುವ ಹೇಳಿಕೆಯನ್ನು ಪುನರುಚ್ಚರಿಸಿದ್ದರು.

ಕೆನಡಾದಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕನ ಹತ್ಯೆಗೆ ಸಂಬಂಧಿಸಿದಂತೆ ಅಲ್ಲಿನ ಪ್ರಧಾನಿ ಜಸ್ಟಿನ್ ಟ್ರುಡೊ, ಆರೋಪದ ಕುರಿತು ಪ್ರತಿಕ್ರಿಯಿಸಿದ ರಣಧೀರ್, 'ಪ್ರಧಾನಿ ಟ್ರುಡೊ ಹೇಳಿರುವುದರಲ್ಲಿ ಹೊಸತೇನಿಲ್ಲ. ವಿವರವನ್ನು ಹಂಚಿಕೊಂಡರೆ ತನಿಖೆ ನಡೆಸಲು ಭಾರತ ಸಿದ್ಧವಾಗಿದೆ. ಆದರೆ ಅಂತಹ ಯಾವುದೇ ಮಾಹಿತಿಯನ್ನು ನೀಡಿಲ್ಲ. ಈ ವಿಷಯದಲ್ಲಿ ರಾಜಕೀಯ ಮಾಡದೆ ಉಗ್ರಗಾಮಿಗಳಿಗೆ ಹೆಚ್ಚಿನ ಆದ್ಯತೆ ನೀಡದಂತೆ ಹೇಳಿದ್ದೇವೆ' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT