ಕೋಲ್ಕತ್ತ: ಇಲ್ಲಿನ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣವನ್ನು ಖಂಡಿಸಿ ಕಿರಿಯ ವೈದ್ಯರು ನಡೆಸುತ್ತಿದ್ದ ಆಮರಣಾಂತ ಉಪವಾಸ ಸೋಮವಾರ ಅಂತ್ಯಗೊಂಡಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ನಡೆದ ಸಂಧಾನ ಸಭೆಯ ಬಳಿಕ ಉಪವಾಸ ಸತ್ಯಾಗ್ರಹವನ್ನು ಕೈಬಿಡಲು ಕಿರಿಯ ವೈದ್ಯರು ಒಪ್ಪಿದ್ದಾರೆ. ಅಲ್ಲದೇ, ಮಂಗಳವಾರದಿಂದ ಪಶ್ಚಿಮ ಬಂಗಾಳದಾದ್ಯಂತ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಉದ್ದೇಶಿಸಿದ್ದ ನಿರ್ಧಾರವನ್ನೂ ಹಿಂಪಡೆದಿದ್ದಾರೆ.

ಮುಖ್ಯಮಂತ್ರಿಯವರು ನಮ್ಮ ಕೆಲ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮ ಆರೋಗ್ಯ ಹದಗೆಟ್ಟಿದ್ದು, ಉಪವಾಸವನ್ನು ನಿಲ್ಲಿಸುವಂತೆ ಜನರು ಒತ್ತಾಯಿಸಿದರು. ಹೀಗಾಗಿ ಆಮರಣಾಂತ ಉಪವಾಸವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದೇವೆ ಎಂದು ಪ್ರತಿಭಟನನಿರತ ಕಿರಿಯ ವೈದ್ಯರು ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.