ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಕಾಂಜೀಲಾಲ್ ಟಿಎಂಸಿಗೆ ಸೇರ್ಪಡೆ

Last Updated 5 ಫೆಬ್ರುವರಿ 2023, 14:36 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಸುಮನ್‌ ಕಾಂಜೀಲಾಲ್‌ ಅವರು ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ (ಟಿಎಂಸಿ) ಭಾನುವಾರ ಇಲ್ಲಿ ಸೇರ್ಪಡೆಗೊಂಡರು.

‘ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿ ಅವರು ಪಕ್ಷದ ಧ್ವಜವನ್ನು ಕಾಂಜೀಲಾಲ್‌ ಅವರಿಗೆ ಹಸ್ತಾಂತರಿಸುವ ಮೂಲಕ ಬರಮಾಡಿಕೊಂಡರು’ ಎಂದು ಟಿಎಂಸಿ ಹೇಳಿಕೆ ನೀಡಿದೆ. ರಾಜ್ಯದಲ್ಲಿ ಪಂಚಾಯಿತಿ ಚುನಾವಣೆ ಸಮೀಪಿಸುತ್ತಿರುವಾಗಲೇ ಕಾಂಜೀಲಾಲ್‌ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ವಕ್ತಾರ ಸಮಿಕ್‌ ಭಟ್ಟಾಚಾರ್ಯ ಅವರು, ‘ಕಾಂಜೀಲಾಲ್‌ ಹೊರಹೋಗಿರುವುದು ಪಕ್ಷದ ಮೇಲೆ ಪ್ರಭಾವ ಬೀರುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT