ಕೋಲ್ಕತ್ತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ತುಷ್ಟೀಕರಣ ರಾಜಕೀಯ ನಡೆಸುತ್ತಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಇಂದು (ಮಂಗಳವಾರ) ಧರಣಿ ನಡೆಸಿದ್ದಾರೆ.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ವಿಧಾನಸಭೆ ಸಭಾಂಗಣದ ಮುಖ್ಯ ದ್ವಾರಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ಕುಳಿತು ಸುಮಾರು 30 ಬಿಜೆಪಿ ಶಾಸಕರು ಪ್ರತಿಭಟಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, ‘ನಾವು ಯಾವುದೇ ಸಮುದಾಯದ ವಿರುದ್ಧ ಹೋರಾಡುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಪಶ್ಚಿಮ ಬಂಗಾಳದ ಕೆಲವು ಕಡೆಗಳಲ್ಲಿ ದುರ್ಗಾ, ಲಕ್ಷ್ಮೀ ಮತ್ತು ಕಾರ್ತಿಕ ದೇವರ ಮೂರ್ತಿಗಳ ಧ್ವಂಸವನ್ನು ತಡೆಯುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ. ಶಿಕ್ಷಣ ಸಂಸ್ಥೆಗಳಲ್ಲಿ ಸರಸ್ವತಿ ಪೂಜೆಯನ್ನು ನಿಲ್ಲಿಸುವ ಪ್ರಯತ್ನವನ್ನು ನಾವು ವಿರೋಧಿಸುತ್ತೇವೆ’ ಎಂದು ಹೇಳಿದ್ದಾರೆ.

ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದಡಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಮೂವರು ಬಿಜೆಪಿ ಶಾಸಕರನ್ನು ಸೋಮವಾರ ಬಜೆಟ್ ಅಧಿವೇಶನದಿಂದ ಸಭಾಪತಿ ಅಮಾನತುಗೊಳಿಸಿದ್ದರು.
.ಕಾಶ್ಮೀರದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನ ಕುರಿತು ಅಮಿತ್ ಶಾ ಸಭೆ.ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ: ಯಾರಿವರು? .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.