ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲ್ಲಿದ್ದಲು ಕಳ್ಳತನ ಹಗರಣ: ಮಾಝಿ ಶರಣಾಗತಿ

Published 14 ಮೇ 2024, 15:55 IST
Last Updated 14 ಮೇ 2024, 15:55 IST
ಅಕ್ಷರ ಗಾತ್ರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಹುಕೋಟಿ ಕಲ್ಲಿದ್ದಲು ಕಳ್ಳತನ ಹಗರಣದ ಪ್ರಮುಖ ಆರೋಪಿ ಅನೂಪ್‌ ಮಾಝಿ ಮಂಗಳವಾರ ಆಸನ್‌ಸೋಲ್‌ನಲ್ಲಿ ಸಿಬಿಐ ಕೋರ್ಟ್‌ ಎದುರು ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಮಾಝಿ ಅಲಿಯಾಸ್‌ ಲಾಲಾ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದರು.

ಇದಕ್ಕೂ ಮುನ್ನ ಮಾಝಿ ತನಿಖೆಗೆ ಸಹಕರಿಸುತ್ತಿದ್ದ ಕಾರಣ ಅವರ ಬಂಧನಕ್ಕೆ ಸುಪ್ರೀಂ ಕೋರ್ಟ್‌ ಮಧ್ಯಂತರ ತಡೆ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ಮೂವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. 

ಪ್ರಕರಣದ ಬಗ್ಗೆ ಸಿಬಿಐ 2020ರಿಂದ ತನಿಖೆ ನಡೆಸುತ್ತಿದ್ದು, ಈ ವರ್ಷ ಮೇ 21ರಂದು ದೋಷಾರೋಪ ಪಟ್ಟಿ ಸಲ್ಲಿಸಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT