ಕೋಲ್ಕತ್ತ (ಪಿಟಿಐ): ಟಿಎಂಸಿ ಅವಧಿಯಲ್ಲಿ ನಡೆದ ಸಾಂಸ್ಥಿಕ ಭ್ರಷ್ಟಾಚಾರ ಮತ್ತು ಮಹಿಳೆಯರು, ಬಾಲಕಿಯರ ವಿರುದ್ಧದ ದೌರ್ಜನ್ಯ ಪ್ರಕರಣಗಳ ತನಿಖೆಗಾಗಿ ಎರಡು ಸಮಿತಿ ರಚನೆಗೆ ಸರ್ಕಾರ ಅನುಮೋದನೆ ನೀಡಿದೆ.

ಕಲ್ಕತ್ತ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗಳು ಸಮಿತಿಗಳ ನೇತೃತ್ವ ವಹಿಸಲಿದ್ದಾರೆ. ಜೂನ್ 1ರಿಂದ ಅವರು ಕಾರ್ಯಪ್ರವೃತ್ತ ರಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ತಿಳಿಸಿದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡಿದ ವಾಗ್ದಾನವನ್ನು ಈಡೇರಿಸುವ ಬದ್ಧತೆ ಹಾಗೂ ಸಾರ್ವಜನಿಕ ಹಿತಾಸಕ್ತಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ನಿವೃತ್ತ ನ್ಯಾಯಮೂರ್ತಿ ವಿಶ್ವಜಿತ್ ಬಸು ಅವರು ಸಾಂಸ್ಥಿಕ ಭ್ರಷ್ಟಾಚಾರ ಪ್ರಕರಣಗಳ ತನಿಖೆಗಾಗಿ ರಚನೆಯಾದ ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಐಪಿಎಸ್ ಅಧಿಕಾರಿ ಜಯರಾಮನ್ ಅವರು ಸದಸ್ಯರಾಗಿರಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಕಲ್ಯಾಣ ಕಾರ್ಯಕ್ರಮಗಳು, ಸಾರ್ವಜನಿಕ ಕಾಮಗಾರಿಗಳಲ್ಲಿನ ಅವ್ಯವಹಾರಗಳ ಬಗ್ಗೆ ಸಮಿತಿ ತನಿಖೆ ನಡೆಸಲಿದೆ ಎಂದು ತಿಳಿಸಿದರು.

ನಿವೃತ್ತ ನ್ಯಾಯಮೂರ್ತಿ ಸಮಾಪ್ತಿ ಚಟರ್ಜಿ ಅವರು ಮತ್ತೊಂದು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಐಪಿಎಸ್ ಅಧಿಕಾರಿ ದಮಯಂತಿ ಸೇನ್ ಅವರು ಸದಸ್ಯ ಕಾರ್ಯದರ್ಶಿಯಾಗಿ ಇರಲಿದ್ದಾರೆ. ರಾಜ್ಯದಲ್ಲಿ ಹಲವು ವರ್ಷಗಳಿಂದ ಮಹಿಳೆಯರು ಮತ್ತು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆ ಇದು ತನಿಖೆ ನಡೆಸಲಿದೆ ಎಂದು ಹೇಳಿದರು.

‘ಸಮಿತಿಯ ಸದಸ್ಯರು ಪೊಲೀಸ್ ಠಾಣೆಗಳು, ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ, ಹೇಳಿಕೆಗಳನ್ನು ದಾಖಲಿಸಿ ಕೊಳ್ಳಲಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಸಾರ್ವಜನಿಕರಿಂದಲೂ ಅಹವಾಲು ಸ್ವೀಕರಿಸಲಿದ್ದಾರೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-51-1096577671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.