ಕೋಲ್ಕತ್ತ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ವಕೀಲೆ ರಿಂಕಿ ಚಟ್ಟೋಪಾಧ್ಯಾಯ ಸಿಂಗ್ ಅವರು ಮೇ 20ರಂದು ಸಿಲಿಗುರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಪ್ರಕರಣ ದಾಖಲಿಸಲು ನಿರಾಕರಿಸಿದ್ದರು. ಸತತ ಪ್ರಯತ್ನಗಳ ನಂತರವಷ್ಟೇ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಬ್ಯಾನರ್ಜಿ ಅವರು ನೀಡಿದ್ದ ಈ ಎರಡು ಹೇಳಿಕೆಗಳು (2025ರಲ್ಲಿ ನಡೆದ ಧಾರ್ಮಿಕ ಸಮಾರಂಭಮವೊಂದರಲ್ಲಿ ನೀಡಿದ ಹೇಳಿಕೆ ಹಾಗೂ ವಿಧಾನಸಭಾ ಚುನಾವಣೆಗೆ ಮುನ್ನ ಧರ್ಮತಲಾದಲ್ಲಿ ನಡೆದ ಪ್ರತಿಭಟನೆಯಲ್ಲಿ ನೀಡಿದ ಹೇಳಿಕೆ) ಭಾರತ ಮತ್ತು ಪ್ರಪಂಚದಾದ್ಯಂತ ಇರುವ ಲಕ್ಷಾಂತರ ಹಿಂದೂಗಳ ಭಾವನೆಗಳು ಮತ್ತು ನಂಬಿಕೆಗಳಿಗೆ ತೀವ್ರ ನೋವುಂಟು ಮಾಡಿವೆ ಎಂದು ದೂರುದಾರರು ಆಪಾದಿಸಿದ್ದಾರೆ.

ಈ ಹೇಳಿಕೆಗಳು ಸಂವಿಧಾನ ವಿರೋಧಿ ಮತ್ತು ಪ್ರಚೋದನಾತ್ಮಕ ಸ್ವರೂಪದ್ದಾಗಿವೆ ಎಂದು ವಕೀಲೆ ಆರೋಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದು ನಿರ್ದಿಷ್ಟ ಸಮುದಾಯವು ಬಯಸಿದರೆ ಕೇವಲ ಐದು ನಿಮಿಷಗಳಲ್ಲಿ ಇತರರನ್ನು 'ಮುಗಿಸಿಬಿಡಬಹುದು' ಎಂದು ಬ್ಯಾನರ್ಜಿ ಹೇಳಿದ್ದಾರೆ. ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಯಿಂದ ಅಂತಹ ಹೇಳಿಕೆಗಳನ್ನು ನಿರೀಕ್ಷಿಸಲಾಗದು ಎಂದು ದೂರುದಾರರು ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಮಮತಾ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಸಿಲಿಗುರಿ ಪೊಲೀಸ್ ಕಮಿಷನರೇಟ್ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.