ಕೋಲ್ಕತ್ತ: ಏಕಪಕ್ಷೀಯವಾಗಿ ನೀರು ಬಿಡುವ ಮೂಲಕ ಬಂಗಾಳದ ದಕ್ಷಿಣ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಗೆ ಕಾರಣವಾಗಿರುವ ದಾಮೋದರ ವ್ಯಾಲಿ ಕಾರ್ಪೋರೇಶನ್ (ಡಿವಿಸಿ) ಜೊತೆಗಿನ ಎಲ್ಲ ಒಪ್ಪಂದಗಳನ್ನು ಕಡಿದುಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.

ಅಲ್ಲದೆ ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣವೇ ಕೇಂದ್ರ ಹಣ ಬಿಡುಗಡೆಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

‘2009ರ ನಂತರ ದಾಮೋದರ ನದಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳು ಅತಿದೊಡ್ಡ ಪ್ರವಾಹಗಳನ್ನು ಎದುರಿಸುತ್ತಿವೆ. ಈ ವಿಷಯವನ್ನು ನೀವು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಈ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಸಚಿವಾಲಯಗಳಿಗೆ ನಿರ್ದೇಶನ ನೀಡಬೇಕು. ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಬೇಕು’ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ವರ್ಷದಲ್ಲಿ 5.5 ಲಕ್ಷ ಕ್ಯೂಸೆಕ್ ನೀರನ್ನು ಡಿವಿಸಿ ಬಿಡುಗಡೆಗೊಳಿಸಿದೆ. ಹೀಗಾಗಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ ಅವರು ಆರೋಪಿಸಿದ್ದಾರೆ.
.ಪಶ್ಚಿಮ ಬಂಗಾಳ ಪ್ರವಾಹದ ಹಿಂದೆ ಕೇಂದ್ರ ಸರ್ಕಾರದ ಪಿತೂರಿ: ಸಿಎಂ ಮಮತಾ ಆರೋಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.