ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಪಶ್ಚಿಮ ಬಂಗಾಳ: ಮತದಾನದ ದಿನ ರಜೆ ಘೋಷಣೆ

Published 29 ಮಾರ್ಚ್ 2024, 6:02 IST
Last Updated 29 ಮಾರ್ಚ್ 2024, 6:02 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪ ಚುನಾವಣೆಗಳಲ್ಲಿ ಮತದಾನ ನಡೆಯುವ ದಿನ ಆಯಾ ಕ್ಷೇತ್ರಗಳಲ್ಲಿ ಸ್ಥಳೀಯವಾಗಿ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಲೋಕಸಭೆಗೆ ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.

ಎಲ್ಲಾ ಸರ್ಕಾರಿ ಕಚೇರಿಗಳು, ಸಂಸ್ಥೆಗಳು, ನಿಗಮಗಳು, ಮಂಡಳಿಗಳು, ಶಾಸನಬದ್ಧ ಮತ್ತು ಸ್ಥಳೀಯ ಸಂಸ್ಥೆಗಳು ಹಾಗೂ ಸಂಸತ್ತಿನ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಶಿಕ್ಷಣ ಸಂಸ್ಥೆಗಳು ಮತದಾನದ ದಿನದಂದು ಕಾರ್ಯ ನಿರ್ವಹಿಸುವುದಿಲ್ಲ. ಇದರಿಂದಾಗಿ ಪ್ರತಿಯೊಬ್ಬ ಉದ್ಯೋಗಿಯು ತನ್ನ ಹಕ್ಕು ಚಲಾಯಿಸಬಹುದು. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ ಚಲಾಯಿಸಲು ಅನುಕೂಲವಾಗಲು ಕಾರ್ಮಿಕರಿಗೆ ವೇತನ ಸಹಿತ ರಜೆಯನ್ನು ಘೋಷಣೆ ಮಾಡುವಂತೆ ಕಾರ್ಮಿಕ ಇಲಾಖೆಯು ಸೂಚಿಸಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾನದ ದಿನ ಮತದಾನದ ಪ್ರಕ್ರಿಯೆ ವಿಳಂಬವಾಗಿ ಮುಂದಿನ ದಿನ ಕರ್ತವ್ಯಕ್ಕೆ ಹಾಜರಾಗಲು ತೊಂದರೆ ಆದ್ದಲ್ಲಿ ಅಂದು ಕರ್ತವ್ಯದಲ್ಲಿದ್ದ ಅಧಿಕಾರಿಗಳಿಗೆ ಮರುದಿನ 'ವಿಶೇಷ ರಜೆ' ನೀಡುವ ಕುರಿತು ಅವರು ಪ್ರಸ್ತಾಪಿಸಿದರು.

ರಾಜ್ಯದ 42 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್‌ 19, 26 ಮೇ 7, 13, 20, 25 ಮತ್ತು ಜೂನ್‌ 1 ರಂದು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮೇ 7 ಮತ್ತು ಜೂನ್‌ 1ರಂದು ಉಪಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT