ಸೆಪ್ಟೆಂಬರ್ 2ರಿಂದ ಎರಡು ದಿನಗಳ ಅಧಿವೇಶನ ನಡೆಸಲಾಗವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಸೋಮದೇವ್ ತಿಳಿಸಿದ್ದಾರೆ.
ಚಾಲ್ತಿಯಲ್ಲಿರುವ ಮಸೂದೆಗೆ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಲು ಅನುವಾಗುವಂತೆ ತಿದ್ದುಪಡಿ ತರಲಾಗುವುದು. ಇದರಿಂದ ಅತ್ಯಾಚಾರದಂತಹ ಕೃತ್ಯಗಳಲ್ಲಿ ತೊಡಗುವವರಿಗೆ ಮರಣದಂಡನೆ ವಿಧಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅತ್ಯಾಚಾರದಂತಹ ಕೃತ್ಯಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದ್ದರು.
ವಿಶೇಷ ಅಧಿವೇಶನಕ್ಕೆ ರಾಜ್ಯಪಾಲರು ಅನುಮೋದನೆ ನೀಡುವುದನ್ನು ವಿಳಂಬ ಮಾಡಿದರೆ, ರಾಜಭವನದ ಎದುರೇ ಧರಣಿ ಕೂರುತ್ತೇನೆ ಎಂದೂ ಅವರು ಹೇಳಿದ್ದರು.