ಕೋಲ್ಕತ್ತ: ದಕ್ಷಿಣ ಪರಗಣ 24 ಜಿಲ್ಲೆಯ ಕುಲ್ತಾಲಿಯಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ನಡೆಸಿದ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ವಿಶೇಷ ತನಿಖಾ ದಳವನ್ನು (ಎಸ್ಐಟಿ) ರಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಬಾರುಯೀಪುರದ ಪೊಲೀಸ್ ವರಿಷ್ಠಾಧಿಕಾರಿ ಚಂದ್ರ ಢಾಲಿ ಅವರ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದೆ. ಈ ಪ್ರಕರಣದಲ್ಲಿ ನ್ಯಾಯ ಒದಗಿಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದು ನಮ್ಮ ಬದ್ಧತೆ ಎಂದು ಸ್ಥಳೀಯರಿಗೆ ಖಚಿತಪಡಿಸುತ್ತೇವೆ’ ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಬ್ಬರನ್ನು ಬಂಧಿಸಲಾಗಿದೆ.

ಅಕ್ಟೋಬರ್ 5ರಂದು ನಡೆದ ಘಟನೆಗೆ ರಾಜ್ಯದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸ್ಥಳೀಯರು ರಸ್ತೆ ತಡೆ ನಡೆಸಿ, ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ಇತ್ತೀಚೆಗೆ ಆಕ್ರೋಶ ಹೊರಹಾಕಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.