ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು, ವಿಧಾಸಭೆಯಲ್ಲಿ ಇತ್ತೀಚೆಗೆ ಅಂಗೀಕರಿಸಲಾದ ಅತ್ಯಾಚಾರ ವಿರೋಧಿ ಮಸೂದೆ (ಅಪರಾಜಿತ ಮಸೂದೆ)ಯನ್ನು ಪರಿಶೀಲನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶುಕ್ರವಾರ ಕಳುಹಿಸಿದ್ದಾರೆ ಎಂದು ರಾಜಭವನ ಅಧಿಕಾರಿ ತಿಳಿಸಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಅವರು ಮಸೂದೆ ಹಾಗೂ ಅದಕ್ಕೆ ಸಂಬಂಧಿಸಿದ ತಾಂತ್ರಿಕ ವರದಿಯನ್ನು ತಮಗೆ ಹಸ್ತಾಂತರಿಸಿದ ನಂತರ, ರಾಜ್ಯಪಾಲ ಬೋಸ್ ಅವರು ಅದನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.