ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲ್ಕತ್ತ: ಆರ್‌.ಜಿ ಕರ್‌ ಆಸ್ಪತ್ರೆಯಲ್ಲಿ ದಾಂಧಲೆ; ರಾಜ್ಯಪಾಲ ಆನಂದ್‌ ಬೋಸ್ ಭೇಟಿ

Published : 15 ಆಗಸ್ಟ್ 2024, 9:28 IST
Last Updated : 15 ಆಗಸ್ಟ್ 2024, 9:28 IST
ಫಾಲೋ ಮಾಡಿ
Comments

ಕೋಲ್ಕತ್ತ: ವೈದ್ಯಕೀಯ ವಿದ್ಯಾರ್ಥಿನಿ ಕೊಲೆ, ಅತ್ಯಾಚಾರ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಈ ನಡುವೆ ನಿನ್ನೆ ತಡ ರಾತ್ರಿ ಅಪರಿಚಿತರ ಗುಂಪೊಂದು ಆರ್. ಜಿ ಕರ್‌ ಆಸ್ಪತ್ರೆಗೆ ನುಗ್ಗಿ ದಾಂಧಲೆ ಮಾಡಿದೆ.

ಪರಿಸ್ಥಿತಿ ಅವಲೋಕನಕ್ಕೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ ಆನಂದ ಬೋಸ್‌ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿದರು.

ಕಳೆದ ವಾರ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯ ಕೊಲೆ ಮತ್ತು ಅತ್ಯಾಚಾರ ನಡೆದಿತ್ತು. ಇದನ್ನು ಖಂಡಿಸಿ ಪ್ರತಿಭಟನೆಯಲ್ಲಿ ತೊಡಗಿರುವ ಕಿರಿಯ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಬೋಸ್‌ ಮಾತನಾಡಿದರು.

‘ನಾನು ನಿಮ್ಮೊಂದಿಗಿದ್ದೇನೆ, ಎಲ್ಲರೂ ಸೇರಿ ಈ ಸಮಸ್ಯೆಯನ್ನು ಬಗೆಹರಿಸೋಣ. ನನ್ನ ಕಿವಿ ಮತ್ತು ಕಣ್ಣುಗಳು ತೆರೆದುಕೊಂಡೇ ಇವೆ’ ಎಂದು ವಿದ್ಯಾರ್ಥಿಗಳ ಬಳಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT