ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಬಿಗಿ ಭದ್ರತೆಯಲ್ಲಿ ಪಂಚಾಯತ್‌ ಚುನಾವಣೆ ಮತ ಎಣಿಕೆ

Published 11 ಜುಲೈ 2023, 3:20 IST
Last Updated 11 ಜುಲೈ 2023, 3:20 IST
ಅಕ್ಷರ ಗಾತ್ರ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರದ ನಡುವೆಯೇ ನಡೆದ ಮೂರು ಹಂತದ ಪಂಚಾಯತ್ ಚುನಾವಣೆಯ ಮತ ಎಣಿಕೆಯು ಬಿಗಿ ಭದ್ರತೆಯಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಪರಿಷತ್, ಪಂಚಾಯತ್ ಸಮಿತಿ ಮತ್ತು ಗ್ರಾಮ ಪಂಚಾಯತ್‌ಗಳ 73,887 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ರಾಜ್ಯದ 22 ಜಿಲ್ಲೆಗಳಲ್ಲಿ 339 ಸ್ಥಳಗಳಲ್ಲಿ ಎಣಿಕೆ ನಡೆಯುತ್ತಿದೆ. ಒಟ್ಟು 2.06 ಲಕ್ಷ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತ ಎಣಿಕೆ ಎರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ಎಲ್ಲಾ ಮತಪತ್ರಗಳನ್ನು ಎಣಿಕೆ ಮಾಡಲು ಮತ್ತು ಫಲಿತಾಂಶಗಳನ್ನು ಸಂಗ್ರಹ ಮಾಡಲು ಸಮಯ ತೆಗೆದುಕೊಳ್ಳುತ್ತದೆ. ದಿನದ ಅಂತ್ಯದ ವೇಳೆಗೆ ಅದು ಲಭ್ಯವಾಗುವ ಸಂಭವವಿದೆ ಎಂದು ರಾಜ್ಯ ಚುನಾವಣಾ ಸಮಿತಿ (ಎಸ್‌ಇಸಿ)ಯ ಅಧಿಕಾರಿಗಳು ತಿಳಿಸಿದ್ದಾರೆ. 

ಮತ ಎಣಿಕೆ ಜಾಗಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿಗೊಳಿಸಲಾಗಿದೆ. ಎಲ್ಲಾ ಮತಎಣಿಕೆ ಕೇಂದ್ರಗಳಲ್ಲಿ ಸಶಸ್ತ್ರ ರಾಜ್ಯ ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರ ಪಡೆಯನ್ನು ನಿಯೋಜಿಸಲಾಗಿದೆ. 

ಶನಿವಾರ ನಡೆದ ಚುನಾವಣೆಯ ವೇಳೆ ಮತಪೆಟ್ಟಿಗೆಗಳನ್ನು ಧ್ವಂಸಗೊಳಿಸಿ, ಮತಪತ್ರಗಳನ್ನು ಸುಟ್ಟುಹಾಕಲಾಗಿತ್ತು. ಅಲ್ಲದೆ ‌ಹಲವು ಸ್ಥಳಗಳಲ್ಲಿ ಪ್ರತಿಸ್ಪರ್ಧಿಗಳ ಮೇಲೆ ಬಾಂಬ್‌ಗಳನ್ನು ಎಸೆಯಲಾಗಿತ್ತು. ಈ ಗಲಭೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT