ಸಿತಾಲ್‌ಕುಚಿ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಕೂಚ್‌ಬಿಹಾರ್ ಜಿಲ್ಲೆಯ ಸಿತಾಲ್‌ಕುಚಿ ಗ್ರಾಮದಲ್ಲಿ ಶನಿವಾರ ಮತದಾನದ ವೇಳೆ ಸ್ಥಳೀಯರು ತಮ್ಮ ವಿರುದ್ಧ ದಾಳಿ ನಡೆಸಿ, ಬಂದೂಕುಗಳನ್ನು ಕಸಿದುಕೊಳ್ಳಲು ಮುಂದಾದ ವೇಳೆ ಸಿಐಎಸ್‌ಎಫ್‌ನವರು ಗುಂಡು ಹಾರಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಸಿತಾಲ್‌ಕುಚಿ ಪ್ರದೇಶದಲ್ಲಿ ಮತದಾನದ ವೇಳೆ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಮತದಾನ ನಡೆಯುತ್ತಿರುವ ಈ ಹಳ್ಳಿಯಲ್ಲಿ ಗಲಾಟೆ ನಡೆಯಿತು. ಈ ವೇಳೆ ಸ್ಥಳೀಯರು ಸಿಐಎಸ್‌ಎಫ್ ಸಿಬ್ಬಂದಿಗೆ ಘೇರಾವ್ ಹಾಕಿ, ಬಂದೂಕುಗಳನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದರು. ಆಗ ಕೇಂದ್ರೀಯ ಪಡೆಗಳು ಗುಂಡು ಹಾರಿಸಿದವು. ಪ್ರಾಥಮಿಕ ವರದಿಗಳ ಪ್ರಕಾರ, ಸಿಐಎಸ್‌ಎಫ್ ನಡೆಸಿದ ಗುಂಡಿನ ದಾಳಿಯಿಂದ ನಾಲ್ವರು ಸಾವನ್ನಪ್ಪಿದ್ದಾರೆ‘ ಎಂದು ಅಧಿಕಾರಿ ವಿವರಿಸಿದರು.

ಈ ಘಟನೆ ಕುರಿತು ಚುನಾವಣಾ ಅಧಿಕಾರಿಗಳಿಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.