ರಾಂಚಿ: ಬೆಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಬಾಲಕರನ್ನು ಜಾರ್ಖಂಡ್ನ ರಾಂಚಿ ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ರಕ್ಷಿಸಲಾಗಿದೆ ಎಂದು ಆರ್ಪಿಎಫ್ ಭಾನುವಾರ ಹೇಳಿಕೆ ನೀಡಿದೆ.

ಮಾನವ ಕಳ್ಳಸಾಗಣೆ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಕ್ಷಿಸಲಾದ ಮೂವರು ಬಾಲಕರು ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಝಾಲ್ದಾದವರು.

ಮಾನವ ಕಳ್ಳಸಾಗಣೆ ಮತ್ತು ಬಾಲ ಕಾರ್ಮಿಕ ಪದ್ಧತಿ ವಿರೋಧಿ ವಿಶೇಷ ಕಾರ್ಯಾಚರಣೆ ಸಂದರ್ಭದಲ್ಲಿ, ರೈಲ್ವೆ ಪೊಲೀಸ್ ಪಡೆ ಶನಿವಾರ ಸಂಜೆ ಹಟಿಯಾ ನಿಲ್ದಾಣದಲ್ಲಿ 14–15 ವರ್ಷದೊಳಗಿನ ಮೂವರು ಬಾಲಕರನ್ನು ರಕ್ಷಿಸಿದೆ ಎಂದು ಆರ್ಪಿಎಫ್ ಹೇಳಿಕೆಯಲ್ಲಿ ತಿಳಿಸಿದೆ.

‘ಬೆಂಗಳೂರಿನ ನಿರ್ಮಾಣ ಸ್ಥಳಗಳಿಗೆ ಕಾರ್ಮಿಕರನ್ನು ಕಳುಹಿಸುವುದಾಗಿ ಮತ್ತು ಪ್ರತಿ ಕಾರ್ಮಿಕರಿಗೆ ₹300–400 ಕಮಿಷನ್ ಪಡೆಯುವುದಾಗಿ ವಿಚಾರಣೆಯ ಸಮಯದಲ್ಲಿ ಆರೋಪಿಯು ಒಪ್ಪಿಕೊಂಡಿದ್ದಾನೆ.ಬಂಧಿತ ವ್ಯಕ್ತಿ ಮೊತ್ತೊಬ್ಬ ವ್ಯಕ್ತಿ ಯೊಂದಿಗೆ ಸೇರಿ ವಿವಿಧ ರಾಜ್ಯಗಳಿಂದ ಬಡ ಮಕ್ಕಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಬಹಿರಂಗ ಪಡಿಸಿದ್ದಾರೆ’ ಎಂದು ಅದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.