ನವದೆಹಲಿ: ವಂಚನೆಯ ಉದ್ದೇಶದ ಸ್ಮಾರ್ಟ್‌ಫೋನ್ ಆ್ಯಪ್‌ಗಳನ್ನು ಬಳಸಿ, ಷೇರುಪೇಟೆಯಲ್ಲಿ ಹಣ ಹೂಡಿಕೆ ಮಾಡುವುದಾಗಿ ಜನರನ್ನು ಮೋಸಗೊಳಿಸಿದ ಆರೋಪದ ಅಡಿ ನಾಲ್ಕು ಮಂದಿಯನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಇವರನ್ನು ಬಂಧಿಸಲಾಗಿದೆ.