ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಭಗವಂತ್​ ಮಾನ್ ಒಮ್ಮೆ ಕಾಂಗ್ರೆಸ್​ ಸೇರಲು ಬಯಸಿದ್ದರು: ನವಜೋತ್ ಸಿಂಗ್ ಸಿಧು

 
Published 8 ಮಾರ್ಚ್ 2024, 3:24 IST
Last Updated 8 ಮಾರ್ಚ್ 2024, 3:24 IST
ಅಕ್ಷರ ಗಾತ್ರ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಒಮ್ಮೆ ತಮ್ಮನ್ನು ಸಂಪರ್ಕಿಸಿ ಕಾಂಗ್ರೆಸ್ ಸೇರಲು ಬಯಸಿದ್ದರು ಎಂದು  ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮುಖ್ಯಮಂತ್ರಿ ಭಗವಂತ ಮಾನ್ ಸಾಹೇಬರು ನನ್ನ ಬಳಿಗೆ ಬಂದಿದ್ದರು. ಕಾಂಗ್ರೆಸ್‌ ಸೇರಲು ಬಯಸಿದ್ದ ಅವರು ನಿಮ್ಮ ಜೊತೆ ಉಪನಾಯಕನಾಗಿ ಕೆಲಸ ಮಾಡಲು ಸಿದ್ಧ ಎಂದು ಹೇಳಿದ್ದರು. ಅವರು ನನ್ನ ಭೇಟಿಯಾದ ಸ್ಥಳವನ್ನು ಸಹ ಹೇಳಬಲ್ಲೇ ಎಂದು ಸಿಧು ಹೇಳಿದ್ದಾರೆ. 

ಸಿಧು ಅವರ ಹೇಳಿಕೆಗೆ ಭಗವಂತ್ ಮಾನ್ ಅವರಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಬಿಜೆಪಿಗೆ ಸೇರಬಹುದು ಎಂಬ ವದಂತಿಗಳನ್ನು ತಳ್ಳಿಹಾಕಿದ ಅವರು ನಾನು ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT