ಪುಣೆ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮಂಗಳವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಹೋರಾಟ ಹಾಗೂ ‘ಭಾರತ್ ಬಂದ್‘ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ಅಹಮದ್‌ನಗರ್ ಜಿಲ್ಲೆಯ ರಾಳೆಗಾಂವ್ ಸಿದ್ದಿ ಗ್ರಾಮದಲ್ಲಿ ಮಂಗಳವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ, ‘ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ ನಡೆಯಬೇಕು‘ ಎಂದು ಹೇಳಿದರು.

‘ಸರ್ಕಾರರಗಳು ಭರವಸೆಗಳನ್ನು ಮಾತ್ರ ನೀಡಿದವು. ಆದರೆ ರೈತರ ಬೇಡಿಕೆಗಳನ್ನು ಎಂದಿಗೂ ಈಡೇರಿಸಲಿಲ್ಲ‘ ಎಂದು ಆರೋಪಿಸಿದ ಹಜಾರೆಯವರು, ‘ದೆಹಲಿಯಲ್ಲಿ ನಡೆಯುತ್ತಿರುವ ಈ ಆಂದೋಲನವು ದೇಶಾದ್ಯಂತ ವಿಸ್ತರಿಸಬೇಕೆಂದು ದೇಶದ ಜನರಲ್ಲಿ ನಾನು ಮನವಿ ಮಾಡುತ್ತಿದ್ದೇನೆ‘ ಎಂದರು.

‘ರೈತರ ಹಿತಾಸಕ್ತಿಗಾಗಿ ಕೆಲಸ ಮಾಡಲು ಸರ್ಕಾರದ ಮೇಲೆ ಒತ್ತಡ ತರುವಂತಹ ವಾತಾವರಣವನ್ನು ಈ ಆಂದೋಲನ ಸೃಷ್ಟಿಸಬೇಕು. ಆದರೆ, ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು‘ ಎಂದು ಅವರು ಮನವಿ ಮಾಡಿದರು.

‘ರೈತರು ಹೋರಾಟದ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಇದು ಸರಿಯಾದ ಸಮಯ‘ ಎಂದ ಅವರು ‘ನಾನು ಹಿಂದೆಯೂ ರೈತರ ಹೋರಾಟವನ್ನು ಬೆಂಬಲಿಸುತ್ತಿದ್ದೆ. ಅದನ್ನು ಈಗಲೂ ಮುಂದುವರಿಸುತ್ತೇನೆ‘ ಎಂದು ಹೇಳಿದರು.

‘ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗಕ್ಕೆ (ಸಿಎಸಿಪಿ) ಸ್ವಾಯತ್ತತೆ ನೀಡುವ ಜತೆಗೆ, ಕೃಷಿ ತಜ್ಞ ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕು. ಒಂದೊಮ್ಮೆ ಇದು ಜಾರಿಗೆ ತರಲು ವಿಫಲವಾದರೆ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ‘ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.