ಶೆಗಾಂವ್, ಮಹಾರಾಷ್ಟ್ರ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯು ಮಹಾರಾಷ್ಟ್ರದಲ್ಲಿ 13ನೇ ದಿನವಾದ ಶನಿವಾರ ಬುಲ್ದಾನಾ ಜಿಲ್ಲೆಯ ಶೆಗಾಂವ್‌ನಲ್ಲಿ ಮುಂದುವರಿಯಿತು.

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಮಹಿಳೆಯರು ಮುಖ್ಯವಾಗಿಸ್ವಯಂಸೇವಾ ಸಂಘಗಳ ಸದಸ್ಯರು ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಯಾತ್ರೆಯು ಸಾಗಿದ ಮಾರ್ಗದಲ್ಲಿ ರಾಹುಲ್ ಗಾಂಧಿ ಅವರು ತಮ್ಮೊಂದಿಗೆ ಹೆಜ್ಜೆ ಹಾಕಿದ ಸ್ಥಳೀಯ ನಿವಾಸಿಗಳ ಜೊತೆಗೆ ಚರ್ಚಿಸಿ, ಅವರ ಅಭಿಪ್ರಾಯಗಳನ್ನು ಆಲಿಸಿದರು.

ತೆಲಂಗಾಣದ ಮೂಲಕ ನ.7ರಂದು ಯಾತ್ರೆ ಮಹಾರಾಷ್ಟ್ರ ಪ್ರವೇಶಿಸಿದ್ದು, 14 ದಿನದಲ್ಲಿ 382 ಕಿ.ಮೀ. ಅಂತರವನ್ನು ಕ್ರಮಿಸಿತು. ಯಾತ್ರೆಯು ಬುರ‍್ಹಾನ್‌ಪುರ್ ಗ್ರಾಮದ ಮೂಲಕ ಭಾನುವಾರ ಮಧ್ಯಪ್ರದೇಶವನ್ನು ಪ್ರವೇಶಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.