ಕನ್ಯಾಕುಮಾರಿ: ದೇಶದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಹರಡಲಾಗಿದೆ. ಇದು ಅಂತರ್ಯುದ್ಧಕ್ಕೆ ಕಾರಣವಾಗಬಹುದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹೇಳಿದ್ದಾರೆ.

‘ಭಾರತ್ ಜೋಡೋ ಯಾತ್ರೆ’ಗೆ ಚಾಲನೆ ನೀಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಮತ್ತೆ ಅಧ್ಯಕ್ಷರಾಗಬೇಕೆಂಬ ಒಲವನ್ನು ಕಾಂಗ್ರೆಸ್ ಪಕ್ಷ ಹೊಂದಿದೆ ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ದೇಶದ ಮುಂದೆ ದೊಡ್ಡ ಸವಾಲುಗಳಿದ್ದು, ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾದರೆ ಅವುಗಳನ್ನು ಎದುರಿಸುವುದು ಸುಲಭವಾಗುತ್ತದೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ದ್ವೇಷ, ಉದ್ವಿಗ್ನತೆ, ಹಿಂಸಾಚಾರ ಎಂಬ ವಾತಾವರಣ ನಿರ್ಮಾಣವಾಗಿರುವುದರಿಂದ ‘ಭಾರತ್ ಜೋಡೋ’ ಘೋಷಣೆಯ ಅಗತ್ಯವಿದೆ ಎಂದಿದ್ದಾರೆ.

‘ಜನರ ನಡುವೆ ಪ್ರೀತಿ, ಸಹೋದರತೆ ಮತ್ತು ಸೌಹಾರ್ದತೆ ಇರಬೇಕಿದೆ. ಹಿಂಸಾಚಾರವನ್ನು ಸಹಿಸಲಾರೆವೆಂಬ ಸಂದೇಶವನ್ನು ನಾವು ರವಾನಿಸಬೇಕಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.

‘ಈಗ ದೇಶದಲ್ಲಿ ಧ್ರುವೀಕರಣವಾಗಿದೆ. ಜಾತಿ ಮತ್ತು ಧರ್ಮಗಳ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲಾಗಿದೆ. ಇದನ್ನು ನಿಯಂತ್ರಿಸಬೇಕಿದೆ. ಇಲ್ಲದೇ ಹೋದರೆ, ದೇಶವು ಅಂತರ್ಯುದ್ಧದತ್ತ ಸಾಗಬಹುದು’ ಎಂದು ಅವರು ಹೇಳಿದರು.

ರಾಹುಲ್ ಗಾಂಧಿಯವರು ಅಹಿಂಸೆಯನ್ನು ನಂಬುತ್ತಾರೆ, ಅವರ ಹೃದಯದಲ್ಲಿ ಯಾವುದೇ ದ್ವೇಷವಿಲ್ಲ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.