ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ವಿರುದ್ಧ ಎಷ್ಟು ಸಾಧ್ಯವೋ ಅಷ್ಟು ಕೇಸ್‌ ದಾಖಲಿಸಿ: ರಾಹುಲ್‌ ಗಾಂಧಿ

Published 24 ಜನವರಿ 2024, 6:23 IST
Last Updated 24 ಜನವರಿ 2024, 6:23 IST
ಅಕ್ಷರ ಗಾತ್ರ

ಬರ್ಪೇಟಾ (ಅಸ್ಸಾಂ): ಬಿಜೆಪಿ ಆಡಳಿತವಿರುವ ರಾಜ್ಯವು ತಮಗೆ ಎಷ್ಟು ಸಾಧ್ಯವೋ ಅಷ್ಟು ಪ್ರಕರಣಗಳನ್ನು ನಮ್ಮ ಮೇಲೆ ದಾಖಲಿಸಲು ಧೈರ್ಯ ಮಾಡಿದೆ. ಆದರೆ ನಾವು ಹೆದರುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. 

ಬರ್ಪೇಟಾ ಜಿಲ್ಲೆಯಲ್ಲಿ 'ಭಾರತ್ ಜೋಡೊ ನ್ಯಾಯ್ ಯಾತ್ರೆ’ಯ 7 ನೇ ದಿನದಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭ್ರಷ್ಟ ಮುಖ್ಯಮಂತ್ರಿ ಎಂದು ಟೀಕಿಸಿದ್ದಾರೆ.

‘ಕೇಸ್ ಹಾಕುವ ಮೂಲಕ ನನ್ನನ್ನು ಬೆದರಿಸಬಹುದು ಎಂಬ ಆಲೋಚನೆ ಹಿಮಂತ ಬಿಸ್ವ ಶರ್ಮಾ ಅವರಿಗೆ ಹೇಗೆ ಬಂದಿತೋ ಗೊತ್ತಿಲ್ಲ,  ಎಷ್ಟು ಸಾಧ್ಯವೋ ಅಷ್ಟು ಪ್ರಕರಣಗಳನ್ನು ದಾಖಲಿಸಿ. ಇನ್ನೂ 25 ಕೇಸ್ ದಾಖಲು ಮಾಡಿ, ಬಿಜೆಪಿ-ಆರ್‌ಎಸ್‌ಎಸ್ ಕೂಡ ನನ್ನನ್ನು ಹೆದರಿಸಲು ಸಾಧ್ಯವಿಲ್ಲ’ ಎಂದರು.

ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್‌ ಗಾಂಧಿ ಮತ್ತು ಇತರ ಕಾಂಗ್ರೆಸ್‌ ನಾಯಕರ ವಿರುದ್ಧ ಗುವಾಹಟಿ ಪೊಲೀಸರು ಮಂಗಳವಾರ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದಾರೆ.

ಅಸ್ಸಾಂನ ಭಾಷೆ, ಸಂಸ್ಕೃತಿ ಮತ್ತು ಇತಿಹಾಸವನ್ನು ಅಳಿಸಿ ಹಾಕಲು ಬಿಜೆಪಿ-ಆರ್‌ಎಸ್‌ಎಸ್ ಬಯಸಿದೆ. ಅಸ್ಸಾಂ ಅನ್ನು ನಾಗ್ಪುರದಿಂದ ಹೊರಗಿಡಲು ಯತ್ನಿಸುತ್ತಿದೆ, ಆದರೆ ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ಅಸ್ಸಾಂ ಅನ್ನು ಅಸ್ಸಾಂನಿಂದ ಮಾತ್ರ ಆಳಲು ಸಾಧ್ಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT